
ಪ್ರಜಾವಾಣಿ ವಾರ್ತೆ
ಜೈಲು (ಪ್ರಾತಿನಿಧಿಕ ಚಿತ್ರ)
ಹಾಸನ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಗೆ ಮಗು ಜನಿಸಲು ಕಾರಣವಾಗಿದ್ದ ಅಪರಾಧಿಗೆ ಇಲ್ಲಿನ ಪೋಕ್ಸೊ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ.
ಚನ್ನರಾಯಪಟ್ಟಣ ತಾಲ್ಲೂಕಿನ ಗ್ರಾಮವೊಂದರಲ್ಲಿ ಆರೋಪಿಯು, ತನ್ನ ಪತ್ನಿಯ ಚಿಕ್ಕಪ್ಪನ ಮಗಳಾದ ಬಾಲಕಿಗೆ ಕೆಲಸ ಕೊಡಿಸುವುದಾಗಿ ಹೇಳಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಶ್ರವಣಬೆಳಗೊಳ ಪೊಲೀಸರು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ದೇವರಾಜು ಅವರು, ಶಿಕ್ಷೆ ವಿಧಿಸುವುದರೊಂದಿಗೆ, ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ₹7 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.