ADVERTISEMENT

‘ಗ್ಯಾರಂಟಿಯಿಂದ ಬಡವರಿಗೆ ಅನುಕೂಲ’

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2025, 3:22 IST
Last Updated 23 ನವೆಂಬರ್ 2025, 3:22 IST
ಅರಸೀಕೆರೆ ತಾಲ್ಲೂಕು ಪಂಚಾಯಿತಿ ಸಂಭಾಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು
ಅರಸೀಕೆರೆ ತಾಲ್ಲೂಕು ಪಂಚಾಯಿತಿ ಸಂಭಾಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು   

ಅರಸೀಕೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲವಾಗಿದೆ. ಈ ಯೋಜನೆಯಿಂದ ಯಾರೂ ವಂಚಿತರಾಗಬಾರದು. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಹೇಳಿದರು.

ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಈಚೆಗೆ ನಡೆದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

‘ಗೃಹಲಕ್ಷ್ಮಿ ಹಣವನ್ನು ಅನೇಕ ಮಹಿಳೆಯರು ತಮ್ಮ ಮಕ್ಕಳ ಶಿಕ್ಷಣ, ಸ್ವ–ಉದ್ಯೋಗಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಅನೇಕರಿಗೆ ಈ ಹಣ ನೆರವಿಗೆ ಬಂದಿದೆ. ಶಕ್ತಿ ಯೋಜನೆ ಗ್ರಾಮೀಣ ಮಹಿಳೆಯರು ಊರು ಬಿಟ್ಟು ಹೊರ ಬಂದು ಕೆಲಸ ಮಾಡಲು ಸಹಾಯಕವಾಗಿದೆ’ ಎಂದು ಹೇಳಿದರು.

ADVERTISEMENT

ಯುವನಿಧಿ ಯೋಜನೆ ತಾಲ್ಲೂಕಿನಲ್ಲಿ ಯಶಸ್ವಿಯಾಗಿಲ್ಲ ಇದರ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿ ಅರ್ಹರನ್ನು ನೋಂದಣಿ ಮಾಡಿಸಬೇಕು ಎಂದು ಸೂಚಿಸಿದರು.

ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್, ಆಹಾರ ಇಲಾಖೆ ಶಿರಸ್ತೇದಾರ್ ಬಾಲಚಂದ್ರ, ವಿದ್ಯುತ್ ಇಲಾಖೆ ಎಂಜಿನಿಯರ್‌ ಮಂಜುನಾಥ್‌, ತಾಲ್ಲೂಕು ಪಂಚಾಯಿತಿ ಇಒ ಗಂಗಣ್ಣ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯ ಸಂಚಾಲಕ ರವಿಚಂದ್ರ, ಸಮಿತಿ ಸದಸ್ಯರಾದ ಗಂಡಸಿ ಕಮಲಮ್ಮ, ಬಸವರಾಜ್, ಜಾಜೂರು ಸಿದ್ದೇಶ್‌, ಕೆ.ಆ‌ರ್. ಸತೀಶ್, ಶಿವಕುಮಾರ್, ವಿರೂಪಾಕ್ಷಪ್ಪ, ಪ್ರದೀಪ್ ಕುಮಾರ್, ಕೆಸಿಡಿ ಕುಮಾರ್, ಸತೀಶ್, ಸಿರಾಜ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.