
ಪ್ರಜಾವಾಣಿ ವಾರ್ತೆ
ಅರಸೀಕೆರೆ: ‘ಚಿಕ್ಕ ತಿರುಪತಿ ಎಂದೇ ಖ್ಯಾತಿ ಪಡೆದಿರುವ ನಗರ ಹೊರವಲಯದ ಮಾಲೇಕಲ್ ತಿರುಪತಿ ಗ್ರಾಮದ ಮಾಲೇಕಲ್ ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯ ಜಾತ್ರಾ ಮಹೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ’ ಎಂದು ತಹಶೀಲ್ದಾರ್ ಸಂತೋಷ್ ಕುಮಾರ್ ಹೇಳಿದರು.
ಸೋಮವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ‘ಪ್ರತಿವರ್ಷ ಆಷಾಢದಲ್ಲಿ ಜಾತ್ರೆ ಜರುಗುವುದು ವಾಡಿಕೆ. ಆದರೆ ಕೊರೊನಾ ಹಿನ್ನೆಲೆ ಯಲ್ಲಿ ಜುಲೈ 21ರಂದು ನಡೆಯ ಬೇಕಿದ್ದ ರಥೋತ್ಸವವನ್ನು ಮುಂದೂಡಲಾಗಿದೆ. ಆಡಳಿತ ಮಂಡಳಿ ಸಭೆಯಲ್ಲಿ ದಿನಾಂಕ ನಿಗದಿ ಮಾಡಲಾಗುವುದು. ‘ಏಕಾದಶಿಯಂದು ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ, ಯಾವುದೇ ಉತ್ಸವ ನಡೆಯುವು ದಿಲ್ಲ, ಭಕ್ತರು ಸಹಕರಿಸಬೇಕು’ ಎಂದು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.