ADVERTISEMENT

ಪ್ರತ್ಯೇಕ ಭಯೋತ್ಪಾದನಾ ನಿಗ್ರಹ ದಳ ಅಗತ್ಯ: ಪ್ರಜ್ವಲ್‌ ರೇವಣ್ಣ

​ಪ್ರಜಾವಾಣಿ ವಾರ್ತೆ
Published 21 ಜನವರಿ 2020, 10:39 IST
Last Updated 21 ಜನವರಿ 2020, 10:39 IST

ಹಾಸನ : ರಾಜ್ಯಕ್ಕೆ ಪ್ರತ್ಯೇಕ ಭಯೋತ್ಪಾದನಾ ನಿಗ್ರಹ ದಳ ನೀಡಬೇಕು ಎಂದು ಸಂಸದ ಪ್ರಜ್ವಲ್‌ ರೇವಣ್ಣ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ಗೃಹ ಇಲಾಖೆಯನ್ನು ಮತ್ತಷ್ಟು ಬಲಪಡಿಸಬೇಕು. ಯಾವುದಾದರೂ ದುರ್ಘಟನೆ ನಡೆದರೆ ದೆಹಲಿಯಿಂದ ತಂಡ ಬರಲು ಎಂಟು ತಾಸು ಬೇಕು. ಗುಪ್ತಚರ ಇಲಾಖೆಯೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಹಿಂದೆ ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟವಾಗಿದೆ. ಮಹಲ್‌ಗಳಲ್ಲಿ ಬಾಂಬ್‌ ಇದೆ ಎಂಬ ಬೆದರಿಕೆ ಕರೆಗಳು ಆಗಾಗ್ಗೆ ಬರುತ್ತಿರುತ್ತವೆ. ಹಾಗಾಗಿ ಹತ್ತು ವರ್ಷಗಳ ಹಿಂದೆಯೇ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು’ ಎಂದು ತಿಳಿಸಿದರು.

ಮಂಗಳೂರಿನಲ್ಲಿ ಬಾಂಬ್‌ ಪತ್ತೆ ಹಿನ್ನಲೆಯಲ್ಲಿ ತಪ್ಪಿತಸ್ಥರನ್ನು ಪತ್ತೆ ಹೆಚ್ಚಬೇಕು. ಆಯ ಕಟ್ಟಿನ ಜಾಗದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿ ಮಾಡಬೇಕು ಎಂದರು.

ADVERTISEMENT

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ ಹಾಸನ ರೈಲ್ವೆ ನಿಲ್ದಾಣದಲ್ಲೂ ಶ್ವಾನ ದಳದೊಂದಿಗೆ ಪೊಲೀಸರು ತಪಾಸಣೆ ನಡೆಸಿದರು. ಬ್ಯಾಗ್‌ಗಳನ್ನು ತಪಾಸಣೆಗೆ ಒಳಪಡಿಸಿ, ಪ್ರಯಾಣಿಕರನ್ನು ಪರಿಶೀಲಿಸಿ ಒಳಗೆ ಬಿಡಲಾಯಿತು.

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲೂ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.