ADVERTISEMENT

ಪದವೀಧರರ ಕ್ಷೇತ್ರದ ಚುನಾವಣೆಗೆ ಸಿದ್ಧತೆ; ಎಚ್‌ಡಿಕೆ ಭೇಟಿಯಾದ ಮುಖಂಡರು:

ಎಚ್‌ಡಿಕೆ ಭೇಟಿಯಾದ ಮುಖಂಡರು: ಟಿಕೆಟ್ ನೀಡುವಂತೆ ಮನವಿ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2021, 12:36 IST
Last Updated 28 ಆಗಸ್ಟ್ 2021, 12:36 IST
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ  ಎಚ್.ಡಿ.ಕುಮಾರಸ್ವಾಮಿ ಅವರನ್ನು ಬಿಡದಿಯ ತೋಟದ ಮನೆಯಲ್ಲಿ ಶನಿವಾರ ಮುಖಂಡರು ಭೇಟಿ ಮಾಡಿ ಚರ್ಚಿಸಿದರು. ವಿಧಾನ ಪರಿಷತ್ ಸದಸ್ಯ ಮರಿತಿಬ್ಭೇಗೌಡ,  ಜಯರಾಂ ಕೀಲಾರ ಇದ್ದರು.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ  ಎಚ್.ಡಿ.ಕುಮಾರಸ್ವಾಮಿ ಅವರನ್ನು ಬಿಡದಿಯ ತೋಟದ ಮನೆಯಲ್ಲಿ ಶನಿವಾರ ಮುಖಂಡರು ಭೇಟಿ ಮಾಡಿ ಚರ್ಚಿಸಿದರು. ವಿಧಾನ ಪರಿಷತ್ ಸದಸ್ಯ ಮರಿತಿಬ್ಭೇಗೌಡ,  ಜಯರಾಂ ಕೀಲಾರ ಇದ್ದರು.   

ಹಾಸನ: ಮುಂದಿನ ವರ್ಷ ನಡೆಯುವ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಗೆ ಸ್ಪರ್ಧಾಕಾಂಕ್ಷಿಗಳು
ಸಿದ್ಧತೆ ಕೈಗೊಂಡಿದ್ದು, ಟಿಕೆಟ್‍ಗಾಗಿ ಆಯಾ ಪಕ್ಷದ ಮುಖಂಡರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ.

ಹಾಸನ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ ವ್ಯಾಪ್ತಿ ಒಳಗೊಂಡ ದಕ್ಷಿಣ ಪದವೀಧರರ ಕ್ಷೇತ್ರ ಪ್ರತಿನಿಧಿಸುತ್ತಿರುವ ಜೆಡಿಎಸ್‍ನ ಕೆ.ಟಿ.ಶ್ರೀಕಂಠೇಗೌಡ ಅವರ ಸದಸ್ಯತ್ವದ ಅವಧಿ ಮುಗಿಯುತ್ತಾಬಂದಿದೆ. ಹಾಗಾಗಿ ಆಕಾಂಕ್ಷಿಗಳು ಮತದಾರರ ನೋಂದಣಿ ಆರಂಭಿಸಿದ್ದು, ಟಿಕೆಟ್‍ಗಾಗಿ ಅಯಾ ಪಕ್ಷದ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ.

ಜೆಡಿಎಸ್ ಟಿಕೆಟ್‍ಗೆ ಭಾರೀ ಪೈಪೋಟಿ ಎದುರಾಗಿದೆ. ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಬೆಂಬಲಿಗ ಮಂಡ್ಯ ಜಿಲ್ಲೆಯ ಜಯರಾಂ ಕೀಲಾರ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಯ ಜೆಡಿಎಸ್ ಮುಖಂಡರ ಜತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಅವರನ್ನು ಬಿಡದಿಯ ತೋಟದ ಮನೆಯಲ್ಲಿ ಶನಿವಾರ ಭೇಟಿ ಮಾಡಿ, ಚರ್ಚೆ ನಡೆಸಿದರು.

ADVERTISEMENT

ಸರ್ಕಾರಿ ನೌಕರರ ಸಂಘದ ಮಾಜಿ ಉಪಾಧ್ಯಕ್ಷ ಜಯರಾಂ ಕೀಲಾರ ಅವರು ಮೂರು ದಶಕಗಳಿಂದಮೈಸೂರು ವಿಶ್ವವಿದ್ಯಾಲಯದ ಶೈಕ್ಷಣಿಕ ವಲಯದಲ್ಲಿ ಶಿಕ್ಷಕರು, ಉಪನ್ಯಾಸಕರು, ಸಹಾಯಕ ಪ್ರಾಧ್ಯಾಪಕರು, ಸರ್ಕಾರಿ ನೌಕರರು ಹಾಗೂಪದವೀಧರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಅಲ್ಲದೇ ಶೈಕ್ಷಣಿಕ ಸಮಸ್ಯೆಗಳಿಗೆ ನೆರವು,
ದಾಖಲಾತಿ ಇನ್ನಿತರ ವಿಷಯಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಂಡಿದ್ದಾರೆ ಎಂಬುದನ್ನು ಮುಖಂಡರು ಕುಮಾರಸ್ವಾಮಿ ಅವರ ಗಮನಕ್ಕೆ ತಂದರು.

ಕುಮಾರಸ್ವಾಮಿ ಮಾತನಾಡಿ, ‘ತಂದೆ ಎಚ್.ಡಿ. ದೇವೇಗೌಡ ಅವರ ಜತೆ ಉತ್ತಮ ಒಡನಾಟಹೊಂದಿರುವ ಜಯರಾಂ ಕೀಲಾರ ಅವರ ಪಕ್ಷ ನಿಷ್ಠೆ, ಸಾಮಾಜಿಕ ಕಳಕಳಿಯ ಬಗ್ಗೆ ಎರಡು ಮಾತಿಲ್ಲ. ಸದ್ಯದಲ್ಲಿಯೇ ಪಕ್ಷದ ಶಾಸಕರ ಮತ್ತು ಮುಖಂಡರ ಅಭಿಪ್ರಾಯ ಪಡೆದು ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುವುದು. ಮತದಾರರ ನೋಂದಣಿ ಸೇರಿದಂತೆ ಚುನಾವಣೆಗೆ ಸೂಕ್ತ ತಯಾರಿ ಮಾಡಿಕೊಳ್ಳುವಂತೆ ಸಲಹೆ ನೀಡಿದರು’ ಎಂದು ಮರಿತಿಬ್ಬೇಗೌಡ ತಿಳಿಸಿದರು.

ಜೆಡಿಎಸ್ ಮುಖಂಡರಾದ ಜಿ. ಎನ್.ಶಿವರುದ್ರಪ್ಪ, ಎಚ್.ವಿ.ಜಯರಾಂ, ಕೋಣನಹಳ್ಳಿ ಜಯರಾಂ, ಕೆ. ಎಚ್. ರಾಮಯ್ಯ ವಸತಿ ನಿಲಯದ ಧರ್ಮದರ್ಶಿಗಳಾದ ಕೃಷ್ಣಪ್ಪ, ಶಂಕರಗೌಡ, ರಮೇಶ್, ತೂಬಿನಕೆರೆಲಿಂಗರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.