ADVERTISEMENT

ಪಿಎಫ್‌ಐ ನಿಷೇಧಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 13:26 IST
Last Updated 4 ಮಾರ್ಚ್ 2021, 13:26 IST
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಹಿಂದೂ ಜನ ಜಾಗೃತಿ ಸಂಸ್ಥೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಹಿಂದೂ ಜನ ಜಾಗೃತಿ ಸಂಸ್ಥೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.   

ಹಾಸನ: ಸಮಾಜದ ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುತ್ತಿರುವ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ನಿಷೇಧ ಮಾಡಬೇಕು ಎಂದು ಆಗ್ರಹಿಸಿ ಹಿಂದೂ ಜನ ಜಾಗೃತಿ ಸಂಸ್ಥೆ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಡಳಿತದ ಮೂಲಕ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಮನವಿ ಸಲ್ಲಿಸಲಾಯಿತು.

ಸಂಸ್ಥೆಯ ಜಿಲ್ಲಾ ಪ್ರಮುಖ್‌ ಗೋವಿಂದರಾಜ್‌ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಕೇರಳ ಮತ್ತು ದೆಹಲಿಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಮಾಡಲಾಗಿದೆ. ಈ ಕೃತ್ಯವನ್ನು ಪಿಎಫ್‌ಐ ಸಂಸ್ಥೆ ನಡೆಸಿದೆ ಎಂದು ಕೇರಳ ರಾಜ್ಯದ ಪ್ರಾಥಮಿಕ ಹಂತದ ತನಿಖೆಯಿಂದ ತಿಳಿದು ಬಂದಿದೆ. ಆದ್ದರಿಂದ ಈ ರೀತಿಯ ಘಟನೆಗಳು ನಡೆಯದಂತೆ ಸಂಘಟನೆಯನ್ನು ನಿಷೇಧಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಪ್ರತಿಭಟನೆಯಲ್ಲಿ ಸಂಸ್ಥೆಯ ರಾಜೇಂದ್ರನ್‌, ಮಣಿ, ಪುಟ್ಟಸ್ವಾಮಿ, ಮೂರ್ತಿ, ಆನಂತ, ಕುಮಾರ್‌, ಸೋಮಣ್ಣ, ವೇಣುಗೋಪಾಲ್‌, ಮೇದಾವಿನಿ, ಪುಷ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.