ADVERTISEMENT

ಕೈಗಾರಿಕಾ ಪ್ರದೇಶಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 3:04 IST
Last Updated 22 ಡಿಸೆಂಬರ್ 2021, 3:04 IST
ಹಾಸನ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ಅಧಿಕಾರಿಗಳ ಸಭೆ ನಡೆಸಿದರು. ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಜಿ.ಒ.ಮಹಾಂತಪ್ಪ,  ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದಿನೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಕೃಷ್ಣ, ಕೃಷಿ ಇಲಾಖೆ ಸಹಾಯಕ ಭಾನುಪ್ರಕಾಶ್ ಹಾಜರಿದ್ದರು.
ಹಾಸನ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ಅಧಿಕಾರಿಗಳ ಸಭೆ ನಡೆಸಿದರು. ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಜಿ.ಒ.ಮಹಾಂತಪ್ಪ,  ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದಿನೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಕೃಷ್ಣ, ಕೃಷಿ ಇಲಾಖೆ ಸಹಾಯಕ ಭಾನುಪ್ರಕಾಶ್ ಹಾಜರಿದ್ದರು.   

ಹಾಸನ: ಕೈಗಾರಿಕಾ ಪ್ರದೇಶದಲ್ಲಿ ಮೂಲ ಸೌಕರ್ಯದ ವ್ಯವಸ್ಥೆ ಕಲ್ಪಿಸಲು ಹೆಚ್ಚಿನ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನಾ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆ ಉಂಟಾಗದಂತೆ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಎಂದರು.

ನಂತರ ನಡೆದ ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಮಿತಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಸಣ್ಣ ಕೈಗಾರಿಕೆ ಸ್ಥಾಪಿಸಲು ಮುಂದಾದವರಿಗೆ ಅಗತ್ಯ ಪ್ರೋತ್ಸಾಹ ನೀಡುವುದರ ಜತೆಗೆ ಮೂಲ ಸೌಕರ್ಯ ಒದಗಿಸಬೇಕು. ಸರ್ಕಾರಿ ಯೋಜನೆಗಳ ನೆರವಿನಿಂದ ತರಬೇತಿ ಕೈಗಾರಿಕೆ ಸ್ಥಾಪಿಸುವವರಿಗೆ ಬ್ಯಾಂಕ್‌ಗಳು ಅಗತ್ಯ ಸಾಲ ನೀಡಬೇಕು ಎಂದು ನಿರ್ದೇಶನ ನೀಡಿದರು.

ADVERTISEMENT

ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಜಿ.ಒಮಹಾಂತಪ್ಪ ಮಾತನಾಡಿ, ಅಂದಾಜು 60ಕ್ಕೂ ಹೆಚ್ಚು ಸಣ್ಣ ಕೈಗಾರಿಕೆಗಳು ಬಾಡಿಗೆ ಜಾಗದಲ್ಲಿ ನಡೆಯುತ್ತಿದ್ದು, ಅವರಿಗೆ ಅಗತ್ಯ ಸೌಲಭ್ಯದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದಿನೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿರಾಮಕೃಷ್ಣ, ಕೃಷಿ ಇಲಾಖೆ ಸಹಾಯಕ ಭಾನುಪ್ರಕಾಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.