ADVERTISEMENT

ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ, ಬಸ್‌ ಸಂಚಾರ ಆರಂಭಿಸಿ: ಏಕಾಂಗಿ ಧರಣಿ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 6:52 IST
Last Updated 10 ಏಪ್ರಿಲ್ 2021, 6:52 IST
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಸಾಮಾಜಿಕ ಕಾರ್ಯಕರ್ತ ಕೆ.ಎಸ್‌. ತೀರ್ಥಪ್ಪ ಏಕಾಂಗಿ ಧರಣಿನಡೆಸಿದರು
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಸಾಮಾಜಿಕ ಕಾರ್ಯಕರ್ತ ಕೆ.ಎಸ್‌. ತೀರ್ಥಪ್ಪ ಏಕಾಂಗಿ ಧರಣಿನಡೆಸಿದರು   

ಹಾಸನ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳ ಸಂಚಾರ ಇಲ್ಲದೇ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು, ನೌಕರರು ಮುಷ್ಕರ ಹಿಂಪಡೆದು ಬಸ್‌ ಸಂಚಾರ ಆರಂಭಿಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಕೆ.ಎಸ್‌. ತೀರ್ಥಪ್ಪ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಮೂರು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರದಿಂದ ಶಾಲೆ, ಕಾಲೇಜು ವಿದ್ಯಾರ್ಥಿಗಳು, ತುರ್ತು ಕಾರ್ಯಗಳಿಗೆ ಬೇರೆ ಜಿಲ್ಲೆಗೆ ತೆರಳಬೇಕಾದ ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗಿದೆ ಎಂದು ಆರೋಪಿಸಿದರು.

ಗ್ರಾಮೀಣ ಭಾಗದ ಜನರು ನಗರ ಪ್ರದೇಶಗಳಿಗೆ ಬರಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ನಗರದಲ್ಲಿ ಖಾಸಗಿ ಬಸ್‌ಗಳ ಚಾಲಕರು ಹೆಚ್ಚಿನ ದರ ವಸೂಲು ಮಾಡುತ್ತಿದ್ದಾರೆ. ಬಸ್‌ ಸಮಸ್ಯೆ ನಿವಾರಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.