ADVERTISEMENT

ಪಿಯುಸಿ ಪರೀಕ್ಷೆ: ಹೊಳೆನರಸೀಪುರ ತಾಲೂಕಿನಲ್ಲಿ 21 ವಿದ್ಯಾರ್ಥಿಗಳು ಗೈರು

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2025, 12:38 IST
Last Updated 1 ಮಾರ್ಚ್ 2025, 12:38 IST
ಹೊಳೆನರಸೀಪುರ ಪಟ್ಟಣದ ಬಾಲಕಿಯರ ಪದವಿ ಪೂರ್ವ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿ ಸಂಖ್ಯೆಯನ್ನು ಖಾತ್ರಿಪಡಿಸಿಕೊಂಡರು
ಹೊಳೆನರಸೀಪುರ ಪಟ್ಟಣದ ಬಾಲಕಿಯರ ಪದವಿ ಪೂರ್ವ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿ ಸಂಖ್ಯೆಯನ್ನು ಖಾತ್ರಿಪಡಿಸಿಕೊಂಡರು   

ಹೊಳೆನರಸೀಪುರ: ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಶನಿವಾರದಿಂದ ಪ್ರಾರಂಭವಾಗಿದ್ದು, ತಾಲ್ಲೂಕಿನಲ್ಲಿ ಮೂರು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 1,383 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲ್ಲಿದ್ದಾರೆ ಎಂದು ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಆರ್.ದೇವರಾಜು ತಿಳಿಸಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ 640 ವಿದ್ಯಾರ್ಥಿಗಳು ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 328 ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಬಾಲಕಿಯರ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ 415 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೊಠಡಿ ಮೇಲ್ವಿಚಾರಕರನ್ನು ನೇಮಿಸಿ, ತರಬೇತಿ ನೀಡಲಾಗಿದೆ’ ಎಂದರು.

‘ಕುಡಿಯುವ ನೀರು, ಅಂಗವಿಕಲರಿಗೆ ಪ್ರತ್ಯೇಕ ಕೊಠಡಿ, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಶನಿವಾರ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಕನ್ನಡ ಪರೀಕ್ಷೆಗೆ ಒಟ್ಟು 1,228 ವಿದ್ಯಾರ್ಥಿಗಳು ಹಾಜರಾಗಬೇಕಿತ್ತು, ಆದರೆ 21 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.