ADVERTISEMENT

ಪುಂಡಾನೆ ಸೆರೆ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2021, 16:50 IST
Last Updated 7 ಜೂನ್ 2021, 16:50 IST

ಹಾಸನ: ಆಲೂರು, ಸಕಲೇಶಪುರ ವ್ಯಾಪ್ತಿಯಲ್ಲಿ ಜನರಿಗೆ ಉಪಟಳ ನೀಡುತ್ತಿರುವ ‘ಗುಂಡ’ ಮತ್ತು ‘ಮೌಂಟೇನ್‌’ ಎಂಬ ಪುಂಡಾನೆ ಸೆರೆ ಹಿಡಿದು ರೇಡಿಯೋ ಕಾಲರ್ಅಳವಡಿಸುವ ಕಾರ್ಯಾಚರಣೆ ಜೂನ್‌ 8 ರಿಂದ 11ರ ವರೆಗೆ ನಡೆಯಲಿದೆ.

ಮಲೈಮಹದೇಶ್ವರ ವನ್ಯಜೀವಿಧಾಮಕ್ಕೆ ಗುಂಡ ಹಾಗೂ ಕಾವೇರಿ ವನ್ಯಜೀವಿಧಾಮಕ್ಕೆ ಮೌಂಟೇನ್ ಆನೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.ಈ ಅವಧಿಯಲ್ಲಿ ನಿರ್ಧರಿಸಿದ ಸ್ಥಳಗಳಲ್ಲಿ ರೈತರು ಮತ್ತು ಸಾರ್ವಜನಿಕರು ಕಾರ್ಯಾಚರಣೆಗೆ ಸಹಕರಿಸಬೇಕು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT