ಹಾಸನ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ರಾತ್ರಿ ಸಾಧಾರಣ ಮಳೆಯಾಗಿದೆ.
ನಗರದಲ್ಲಿ ರಾತ್ರಿ 7 ಗಂಟೆಗೆ ಆರಂಭವಾದ ತುಂತುರು ಮಳೆ ಒಂದು ತಾಸು ಸುರಿಯಿತು. ಮಳೆಯಿಂದಾಗಿ ಬೀದಿಬದಿ ವ್ಯಾಪಾರಕ್ಕೂಹೊಡೆತ ಬಿತ್ತು. ಸಾರ್ವಜನಿಕರ ಓಡಾಟಕ್ಕೂ ತೊಂದರೆ ಉಂಟಾಯಿತು. ಸಂಜೆ ಮಹಾವೀರ ಜಯಂತಿ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನರು ಮಳೆಯಲ್ಲಿ ತೊಯ್ದರು.
ಅರಕಲಗೂಡು, ಕೊಣನೂರು, ಸಕಲೇಶಪುರ ಹಾಗೂ ಹೆತ್ತೂರು ಭಾಗದ ಸುತ್ತಮುತ್ತಲ ಪ್ರದೇಶದಲ್ಲಿ ತುಂತುರು ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.