ADVERTISEMENT

ಹಾಸನ | ಭಾರಿ ಮಳೆ: ಇಬ್ಬರ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 16:03 IST
Last Updated 1 ಜೂನ್ 2025, 16:03 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಹಾಸನ: ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಇಬ್ಬರು ಸಾವಿಗೀಡಾಗಿದ್ದಾರೆ.

ಸಕಲೇಶಪುರ ತಾಲ್ಲೂಕಿನ ತಿನಗನಹಳ್ಳಿಯಲ್ಲಿ ನಂಜಯ್ಯ (56) ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ನಂಜಯ್ಯ ಮೇ 26ರಂದು ಜಮೀನಿಗೆ ತೆರಳಿ ಕಾಣೆಯಾಗಿದ್ದರು. ನಿರಂತರ ಮಳೆಯಿಂದ ಶೋಧಕ್ಕೆ ಅಡಚಣೆಯಾಗಿತ್ತು. ಮಳೆ ಕಡಿಮೆಯಾದ ಬಳಿಕ ಹುಡುಕಾಟ ನಡೆಸಿದ್ದು, ಶನಿವಾರ ಸಂಜೆ ತಿನಗನಹಳ್ಳಿಯಲ್ಲಿ ಅವರ ಶವ ಪತ್ತೆಯಾಗಿದೆ.

ADVERTISEMENT

ನಂಜಯ್ಯನವರ ಹುಡುಕಾಟದ ವೇಳೆ ಚಿಕ್ಕಮಗಳೂರು ಜಿಲ್ಲೆಯ ಕಲ್ಲುದೊಡ್ಡಿ ಗ್ರಾಮದ ಕಾರ್ಮಿಕ ಮುರುಗೇಶ್ (65) ಶವವೂ ಪತ್ತೆಯಾಗಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುವ ವೇಳೆ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಈ ಎರಡೂ ಘಟನೆಗಳು ಸಕಲೇಶಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.