ADVERTISEMENT

ಸ್ಮಶಾನ ಒತ್ತುವರಿ ತೆರವಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 25 ಮೇ 2022, 14:32 IST
Last Updated 25 ಮೇ 2022, 14:32 IST
ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ಸಮತಾ ಸೈನಿಕ ದಳ ವತಿಯಿಂದ ಮನವಿ ಸಲ್ಲಿಸಲಾಯಿತು. ಸತೀಶ್, ರಂಜಿತ್ ಕುಮಾರ್, ಶರತ್ ಕುಮಾರ್ ಇದ್ದಾರೆ
ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ಸಮತಾ ಸೈನಿಕ ದಳ ವತಿಯಿಂದ ಮನವಿ ಸಲ್ಲಿಸಲಾಯಿತು. ಸತೀಶ್, ರಂಜಿತ್ ಕುಮಾರ್, ಶರತ್ ಕುಮಾರ್ ಇದ್ದಾರೆ   

ಹಾಸನ: ‘ಪರಿಶಿಷ್ಟ ಜಾತಿಯವರಿಗೆ ಮೀಸಲಾಗಿರುವ ಸ್ಮಶಾನವನ್ನು ಸರ್ವೆ ನಡೆಸಿ, ಒತ್ತುವರಿ ತೆರವು ಮಾಡಿಸಬೇಕು’ ಎಂದು ಸಮತಾ ಸೈನಿಕ ದಳ ವತಿಯಿಂದ ಜಿಲ್ಲಾಧಿಕಾರಿ ಆರ್.ಗಿರೀಶ್‌ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

‘ಬೇಲೂರು ತಾಲ್ಲೂಕು ಅರೇಹಳ್ಳಿ ಹೋಬಳಿಯ ಕಣದೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಸುಮಾರು 75 ಮನೆಗಳಿದ್ದು, ಸರ್ವೇ ನಂಬರ್ 36ರಲ್ಲಿ ಎರಡು ಎಕರೆ ಪರಿಶಿಷ್ಟರಿಗೆ ಸ್ಮಶಾನ ಜಾಗವನ್ನು ಮೀಸಲಿಡಲಾಗಿದೆ. ಈ ಜಾಗದ ಸರ್ವೆ ನಂಬರ್‌ನಲ್ಲಿರುವ ಕೆಲವರು ಸಂಪೂರ್ಣವಾಗಿ ಒತ್ತುವರಿ ಮಾಡಿದ್ದಾರೆ. ಇದರಿಂದ ಪರಿಶಿಷ್ಟರು ಶವ ಹೂಳಲು ಜಾಗವಿಲ್ಲದೆ ಮನೆಯ ಅಕ್ಕಪಕ್ಕದ ಜಾಗದಲ್ಲಿ ಶವ ಸಂಸ್ಕಾರ ಮಾಡುವ ಪರಿಸ್ಥಿತಿ ಉಂಟಾಗಿದೆ’ ಎಂದರು.

‘ಈ ಬಗ್ಗೆ ಹಲವು ಬಾರಿ ತಹಶೀಲ್ದಾರ್‌ರಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಆದಷ್ಟು ಬೇಗ ಸರ್ವೆ ನಡೆಸಿ ಒತ್ತುವರಿಯಾಗಿರುವ ಸ್ಮಶಾನ ಜಾಗವನ್ನು ಬಿಡಿಸಿಕೊಡಬೇಕು’ ಎಂದು ಕೋರಿದರು.

ADVERTISEMENT

ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಆರ್‌ಪಿಐ ಸತೀಶ್, ತಾಲ್ಲೂಕು ಘಟಕದ ಅಧ್ಯಕ್ಷ ರಂಜಿತ್ ಕುಮಾರ್, ಅರಸೀಕೆರೆ ತಾಲ್ಲೂಕು ಘಟಕದ ಅಧ್ಯಕ್ಷ ಶರತ್ ಕುಮಾರ್, ಚೇತನರಾಜು, ಮುಖಂಡರಾದ ಕೃಷ್ಣದಾಸ್, ಮರಿ ಜೋಸೆಫ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.