ADVERTISEMENT

ಚನ್ನರಾಯಪಟ್ಟಣ: ಆಸ್ಪತ್ರೆಗಳ ನವೀಕರಣಕ್ಕೆ ₹2.89 ಕೋಟಿ ಬಿಡುಗಡೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 10 ಜನವರಿ 2025, 13:59 IST
Last Updated 10 ಜನವರಿ 2025, 13:59 IST
ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗಳ ನವೀಕರಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಶಾಸಕ ಸಿ.ಎನ್. ಬಾಲಕೃಷ್ಣ ಬೆಂಗಳೂರಿನಲ್ಲಿ ಗುರುವಾರ ಮನವಿ ಸಲ್ಲಿಸಿದರು
ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗಳ ನವೀಕರಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಶಾಸಕ ಸಿ.ಎನ್. ಬಾಲಕೃಷ್ಣ ಬೆಂಗಳೂರಿನಲ್ಲಿ ಗುರುವಾರ ಮನವಿ ಸಲ್ಲಿಸಿದರು   

ಚನ್ನರಾಯಪಟ್ಟಣ: ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆ ಸೇರಿ ತಾಲ್ಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗಳ ನವೀಕರಣಕ್ಕೆ ₹2.89 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ ಗುರುವಾರ ಮನವಿ ಸಲ್ಲಿಸಿದರು.

ತಾಲ್ಲೂಕು ಕೇಂದ್ರದಲ್ಲಿರುವ ಸಾರ್ವಜನಿಕ ಆಸ್ಪತ್ರೆಯ ದುರಸ್ತಿ ಮತ್ತು ನವೀಕರಣಕ್ಕೆ ₹52 ಲಕ್ಷ, ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿರುವ ಹಳೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರದ ದುರಸ್ತಿಗೆ ₹23 ಲಕ್ಷ, ಹಿರೀಸಾವೆ ಹೋಬಳಿ ಕೇಂದ್ರದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ ದುರಸ್ತಿ ಮತ್ತು ನವೀಕರಣಕ್ಕೆ ₹64.65 ಲಕ್ಷ ಮತ್ತು ಶ್ರವಣಬೆಳಗೊಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಸ್ತ್ರಚಿಕಿತ್ಸಾ ಕಟ್ಟಡ ನಿರ್ಮಾಣಕ್ಕೆ ₹1.50 ಕೋಟಿ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.

ತಾಲ್ಲೂಕಿನಲ್ಲಿ ಆಸ್ಪತ್ರೆಗಳ ಕೆಲವು ಕಟ್ಟಡಗಳು ಶಿಥಿಲವಾಗಿವೆ. ಅದೇರೀತಿ ಶೌಚಾಲಯಗಳ ದುರಸ್ತಿಯಾಗಬೇಕಿದೆ. ಅಸ್ಪತ್ರೆಗಳ ನವೀಕರಣಕ್ಕೆ ಅನುದಾನ ಒದಗಿಸುವಂತೆ ಮನವಿ ಮಾಡಲಾಗಿದ್ದು, ಅದಕ್ಕೆ ಆರೋಗ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.