ಸಾವು
(ಪ್ರಾತಿನಿಧಿಕ ಚಿತ್ರ)
ಹಿರೀಸಾವೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 75ರ ಹಿರೀಸಾವೆ– ಮೇಟಿಕೆರೆ ವೃತ್ತದಲ್ಲಿ ಭಾನುವಾರ ಬೈಕ್–ಸ್ಕೂಟರ್ ನಡುವಿನ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.
ಹೋಬಳಿಯ ಬಾಳಗಂಚಿ ನಿವಾಸಿ ಚಂದ್ರೇಗೌಡ (50) ಮತ್ತು ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕು ವಡಕೇಘಟ್ಟ ಗ್ರಾಮದ ಲಕ್ಷ್ಮಮ್ಮ (55) ಮೃತರು. ಚಂದ್ರೇಗೌಡ ಅವರು ಪತ್ನಿ ಸವಿತಾ ಹಾಗೂ ಅತ್ತಿಗೆ ಲಕ್ಷ್ಮಮ್ಮ ಅವರೊಂದಿಗೆ ಹಿರೀಸಾವೆಯಲ್ಲಿ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಭಾಗವಹಿಸಿ, ಸ್ಕೂಟರ್‌ನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಸವಿತಾ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ಬೆಂಗಳೂರಿಗೆ ಸಾಗಿಸಲಾಗಿದೆ.
ಹಾಸನ ಕಡೆಯಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಬೈಕ್‌ನಲ್ಲಿದ್ದ ಮಂಜುನಾಥ್ ದಂಪತಿಗಳಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ವೃತ್ತದಲ್ಲಿ ಆಗಾಗ ಅಪಘಾತಗಳು ನಡೆಯತ್ತಿದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ, ಶೀಘ್ರವೇ ಅಂಡರ್‌ಪಾಸ್ ನಿರ್ಮಾಣ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.