ಸಾವು
ಪ್ರಾತಿನಿಧಿಕ ಚಿತ್ರ
ಹಿರೀಸಾವೆ: ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂದಿನಿಂದ ಮಿನಿ ವಾಹನ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹಿರೀಸಾವೆ ಠಾಣಾ ವ್ಯಾಪ್ತಿಯ ಮಾದಿಹಳ್ಳಿ ಬಳಿ ಸೋಮವಾರ ನಡೆದಿದೆ.
ಚನ್ನರಾಯಪಟ್ಟಣ ತಾಲ್ಲೂಕು ದಂಡಿಗನಹಳ್ಳಿ ಗ್ರಾಮದ ಬೋರಯ್ಯ (63) ಮೃತ ವ್ಯಕ್ತಿ. ಅಪಘಾತ ಸ್ಥಳಕ್ಕೆ ಹತ್ತಿರ ಇರುವ ಪೆಟ್ರೋಲ್ ಬಂಕ್ ನಲ್ಲಿರುವ ಸಹೋದರನನ್ನು ಮಾತನಾಡಿಸಿ, ಬಸ್ ಹತ್ತಲು, ಮಾದಿಹಳ್ಳಿ ಗೇಟ್ ಗೆ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಆಶೋಕ್ ಲೇಲ್ಯಾಂಡ್ ದೋಸ್ತ್ ವಾಹನ ಡಿಕ್ಕಿ ಹೊಡೆದಿದೆ. ಹಿರೀಸಾವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.