ಬೇಲೂರು: ಇಲ್ಲಿನ ರುಕ್ಮಿಣಿ ಪಾಂಡುರಂಗ ಸ್ವಾಮಿ ದೇಗುಲದಲ್ಲಿ 37ನೇ ವರ್ಷದ ದಿಂಡಿ ಮಹೋತ್ಸವ ಅದ್ದೂರಿಯಾಗಿ ಜರುಗಿತು.
ಮಹೋತ್ಸವದ ಅಂಗವಾಗಿ ರುಕ್ಮಿಣಿ ಪಾಂಡುರಂಗಸ್ವಾಮಿ ದೇವರಿಗೆ ಪುಷ್ಪಾಲಂಕಾರಗಳಿಂದ ಸಿಂಗರಿಸಿ ಪೂಜೆ ಸಲ್ಲಿಸಲಾಯಿತು. ನಂತರ ಭಾವಸಾರ ಕ್ಷತ್ರಿಯ ಸಮಾಜದವರು ಪಾಂಡುರಂಗ ಮತ್ತು ರುಕ್ಮಿಣಿ ದೇವರ ಉತ್ಸವ ಮೂರ್ತಿಗಳನ್ನು ರಥದಲ್ಲಿ ಪ್ರತಿಷ್ಠಾಪಿಸಿ ಭಕ್ತರೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ನಂತರ ಚನ್ನಕೇಶವಸ್ವಾಮಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಸಿಹಿ ಹಂಚಿ ಪಾಂಡುರಂಗನ ಭಜನೆ ಹಾಡುತ್ತಾ ಸಂಭ್ರಮಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.