ಸಕಲೇಶಪುರ: ಪಟ್ಟಣದಲ್ಲಿರುವ ಪುರಸಭೆ ವಾಣಿಜ್ಯ ಮಳಿಗೆಗಳ ಕರಾರು ಅವಧಿ ಮುಗಿದು 12 ವರ್ಷಗಳು ಕಳೆದಿದದು ಎಲ್ಲಾ ಮಳಿಗೆಗಳನ್ನು ಮರು ಹರಾಜು ಮಾಡಲು ಸೋಮವಾರ ಪುರಸಭಾ ಅಧ್ಯಕ್ಷೆ ಆರ್.ಬಿ. ಜ್ಯೋತಿ ರಾಜ್‌ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಪಟ್ಟಣದ ಬಿ.ಎಂ. ರಸ್ತೆಯಲ್ಲಿರುವ ಹೇಮಾವತಿ ಕಾಂಪ್ಲೆಕ್ಸ್, ಪುರಸಭಾ ಮುಂಭಾಗದ ವಾಣಿಜ್ಯ ಮಳಿಗೆ, ಕ್ರಾಫರ್ಡ್ ಆಸ್ಪತ್ರೆಯ ರಸ್ತೆಯಲ್ಲಿರುವ ಮಳಿಗೆಗಳು ಸೇರಿದಂತೆ ಒಟ್ಟು 128 ಮಳಿಗೆಗಳನ್ನು ಮರು ಹರಾಜು ಮಾಡಲು ಎಲ್ಲಾ ಸದಸ್ಯರು ಒಪ್ಪಿಗೆ ಸೂಚಿಸಿದರು.
15ನೇ ಹಣಕಾಸು ಯೋಜನೆಯ ವಿವಿಧ ಕಾಮಗಾರಿಗಳ ಮರು ಹರಾಜಿಗೆ ಸಭೆಯಲ್ಲಿ ಸರ್ವಾನುಮತದ ಒಪ್ಪಿಗೆ ದೊರೆಯಿತು.
ಕುಡಿಯುವ ನೀರು ಯೋಜನೆಯ ಅನೇಕ ಟೆಂಡರ್‌ಗಳನ್ನು ಅನುಮೋದಿಸುವ, ಸಕಲೇಶ್ವರಸ್ವಾಮಿ ರಥೋತ್ಸವ ಅಂಗವಾಗಿ ನಡೆಯುವ ವಸ್ತು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಯಿತು.
ಉಪಾಧ್ಯಕ್ಷೆ ಝರೀನಾ ಹಾಗೂ ಸದಸ್ಯರು, ಮುಖ್ಯಾಧಿಕಾರಿ ಮಹೇಶ್ವರಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.