ADVERTISEMENT

ಬೇಡಿಕೆ ಈಡೇರಿಸಿದ ಹಾಸನಾಂಬೆ: ಸಚಿವ ಪಾಟೀಲ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2020, 21:04 IST
Last Updated 15 ನವೆಂಬರ್ 2020, 21:04 IST
ಬಿ.ಸಿ.ಪಾಟೀಲ, ಕೃಷಿ ಸಚಿವ 
ಬಿ.ಸಿ.ಪಾಟೀಲ, ಕೃಷಿ ಸಚಿವ    

ಹಾಸನ: ‘ಶಾಸಕ ಸ್ಥಾನದಲ್ಲಿಲ್ಲದೇ,ಕಳೆದ ವರ್ಷ ದೇವಿ ದರ್ಶನಕ್ಕೆ ಬಂದಿದ್ದ ನಾನು ಈ ಬಾರಿ ಸಚಿವನಾಗಿ ಬಂದಿದ್ದೇನೆ. ಹಾಸನಾಂಬೆ ನನ್ನ ಪ್ರಾರ್ಥನೆಯನ್ನು ಈಡೇರಿಸಿದ್ದಾಳೆ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಶನಿವಾರ ರಾತ್ರಿ ಹಾಸನಾಂಬಾ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2019ರ ನವೆಂಬರ್‌ನಲ್ಲಿ ಹಾಸನಾಂಬೆ ಜಾತ್ರೆಗೆ ಬಂದಾಗ ಉಪಚುನಾವಣೆಯಲ್ಲಿ ಗೆಲ್ಲಿಸುವಂತೆ ಪ್ರಾರ್ಥಿಸಿದ್ದೆ. ಈಗ ಕೃಷಿ ಸಚಿವನಾಗಿ ತಾಯಿಯ ದರ್ಶನ ಪಡೆದಿದ್ದೇನೆ’ ಎಂದರು.

‘ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್‌. ಯಡಿಯೂರಪ್ಪ ಅವರ ಭೇಟಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಅಭಿವೃದ್ಧಿ ವಿಚಾರವಾಗಿ ನಾಯಕರಿಬ್ಬರೂ ಮಾತುಕತೆ ನಡೆಸಿರಬಹುದು. ಶಾಸಕ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಅವರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡೋಣ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.