ADVERTISEMENT

ಹಿರೀಸಾವೆ | 28 ಶಾಲಾ ಕೊಠಡಿ ಶೀಘ್ರ; ಸಿ.ಎನ್. ಬಾಲಕೃಷ್ಣ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2026, 6:04 IST
Last Updated 6 ಫೆಬ್ರುವರಿ 2026, 6:04 IST
ಹಿರೀಸಾವೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಹೊಸ 8 ಕೊಠಡಿಗಳ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಬಾಲಕೃಷ್ಣ ಮಾತನಾಡಿದರು. ಪ್ರಾಂಶುಪಾಲ ಎನ್.ಆರ್. ಮರುಳಾರಾಧ್ಯ  ಭಾಗವಹಿಸಿದ್ದರು
ಹಿರೀಸಾವೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಹೊಸ 8 ಕೊಠಡಿಗಳ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಬಾಲಕೃಷ್ಣ ಮಾತನಾಡಿದರು. ಪ್ರಾಂಶುಪಾಲ ಎನ್.ಆರ್. ಮರುಳಾರಾಧ್ಯ  ಭಾಗವಹಿಸಿದ್ದರು   

ಹಿರೀಸಾವೆ: ‘ಶ್ರವಣಬೆಳಗೊಳ ಕ್ಷೇತ್ರದಲ್ಲಿ ವಿವೇಕ ಯೋಜನೆಯಲ್ಲಿ 28 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲು ಸರ್ಕಾರ ಅನುದಾನ ನೀಡಿದೆ’ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಗುರುವಾರ ಹಿರೀಸಾವೆಯಲ್ಲಿ ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ₹1.75 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ 8 ಕೋಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.  ಪಿಯು ಕಾಲೇಜಿಗಳಿಗೆ 14 ಕೊಠಡಿಗಳನ್ನು ನಿರ್ಮಿಸಲಾಗಿದೆ. ಸರ್ಕಾರಿ ಶಾಲೆಗಳು, ಕಾಲೇಜುಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.  ಮಕ್ಕಳ ದಾಖಲಾತಿಹೆಚ್ಚಿಸಿ, ಶಾಲಾ, ಕಾಲೇಜುಗಳನ್ನು ಉಳಿಸಿಕೊಳ್ಳಬೇಕು ಎಂದು ಸೂಚಿಸಿದರು.

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು,  ಹೆಚ್ಚು ಅಭ್ಯಾಸ ಮಾಡಿ, ಉತ್ತಮ ಫಲಿತಾಂಶ ಪಡೆದುತಾಲ್ಲೂಕಿಗೆ ಹೆಸರು ತರಬೇಕು.  ಇಲ್ಲಿ ಕೆಪಿಎಸ್ ಶಾಲೆ ಆರಂಭಿಸಲಾಗುವುದು. ಹಿರೀಸಾವೆಯಲ್ಲಿ ಪ್ರವಾಸಿ ಮಂದಿರ ನಿರ್ಮಿಸಲಾಗುವುದು ಎಂದು ತಿಳಿಸಿದರು.

ADVERTISEMENT

 ಪ್ರಾಂಶುಪಾಲ ಎನ್.ಆರ್. ಮರುಳಾರಾಧ್ಯ  ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಪರಮೇಶ್, ಪಿಎಸಿಸಿಬಿ ಅಧ್ಯಕ್ಷ ಮಹೇಶ್,  ಮುಖಂಡರಾದ ರಾಮಕೃಷ್ಣ, ರವಿಕುಮಾರ್, ಬೋರೇಗೌಡ, ರೋಡ್ ಮಂಜುನಾಥ್, ಎಚ್.ಕೆ. ವೆಂಕಟೇಶ್, ದಿನೇಶ್, ಎಚ್.ಜಿ. ಮಂಜುನಾಥ್, ಮುಖ್ಯ ಶಿಕ್ಷಕ ಅಶೋಕ್, ಎಂಜಿನಿಯರ್ ಮಂಜುನಾಥ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.