
ಹೆತ್ತೂರು: ವಿಜ್ಞಾನ ಮತ್ತು ಗಣಿತ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ಕುತೂಹಲ ಕೆರಳಿಸುವ, ಕಲಿಕೆಯನ್ನು ಉತ್ತೇಜಿಸುವ ಮತ್ತು ವೈಜ್ಞಾನಿಕ ಚಿಂತನೆ ಬೆಳೆಸುವ ಪ್ರಮುಖ ಶೈಕ್ಷಣಿಕ ಕಾರ್ಯಕ್ರಮಗಳಾಗಿವೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಕರಡಿಗಾಲ ತಿಳಿಸಿದರು.
ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ್ ಕಾರ್ಯಕ್ರಮದಡಿ ಏರ್ಪಡಿಸಿದ್ದ ವಿಜ್ಞಾನ, ಗಣಿತ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪ್ರಯೋಗಗಳನ್ನು ಮಾಡಲು, ಹೊಸತನವನ್ನು ಪ್ರದರ್ಶಿಸಲು ಮತ್ತು ನಿಜ ಜೀವನದ ಸಮಸ್ಯೆಗಳಿಗೆ ವೈಜ್ಞಾನಿಕ ತತ್ವಗಳನ್ನು ಅನ್ವಯಿಸಲು ಅವಕಾಶ ನೀಡುವ ವೇದಿಕೆಯಾಗುತ್ತದೆ ಎಂದರು.
ಈ ರೀತಿಯ ಕಾರ್ಯಕ್ರಮ ಮಾಡುವುದರಿಂದ ಮಕ್ಕಳಲ್ಲಿ ಕಲಿಕಾ ಆಸಕ್ತಿ ಹೆಚ್ಚಿಸಬಹುದು ಎಂದರು.
ಶೈಕ್ಷಣಿಕ ಗುಣಮಟ್ಟ ಖಾತರಿ ಸಮಿತಿ ಅಧ್ಯಕ್ಷ ಅಶೋಕ್, ಎಸ್‌ಡಿಎಂಸಿ ಸದಸ್ಯರಾದ ಆಶಾ, ಸಚಿನ್, ಮುಖ್ಯ ಶಿಕ್ಷಕ ಭಾಸ್ಕರ್ ಬಿ., ಗಣಿತ ಶಿಕ್ಷಕ ಮಹೇಶ್, ವಿಜ್ಞಾನ ಶಿಕ್ಷಕಿ ಮಧುಕಲಾ, ಬೋಧಕ, ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.