ADVERTISEMENT

ಬೆಂಗಳೂರು–ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2022, 15:32 IST
Last Updated 6 ಏಪ್ರಿಲ್ 2022, 15:32 IST

ಹಾಸನ: ‘ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಮಲೆನಾಡು, ಕರಾವಳಿ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಹಾಗೂಬಯಲು ಸೀಮೆ ಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

‘ಸಿದ್ದರಾಮಯ್ಯ ಅವರುಮುಖ್ಯಮಂತ್ರಿಯಾಗಿದ್ದಾಗ ಪ್ರಣಾಳಿಕೆಯಲ್ಲಿ ಕೊಟ್ಟ ಮಾತನ್ನು ಶೇ 90ರಷ್ಟುಉಳಿಸಿಕೊಂಡಿದ್ದೇವೆ. ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿ ಜನರನ್ನು ಆಕರ್ಷಿಸಿ, ಉದ್ಯೋಗ ಸೃಷ್ಟಿಗೆ ಕಾರ್ಯಕ್ರಮ ರೂಪಿಸುತ್ತೇವೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ದೇವಸ್ಥಾನದ ಒಳಗೆ ಗಲಾಟೆಯಾಗಬಾರದು ಎಂದು ಕಾಂಗ್ರೆಸ್‌ ಸರ್ಕಾರ ರೂಪಿಸಿದ್ದ ಕಾಯ್ದೆಯನ್ನೇ ಮುಂದಿಟ್ಟು ಜಾತ್ರೆ, ಸಂತೆಗಳಲ್ಲಿ ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧಿಸಿ ಅವರ ಹೊಟ್ಟೆ ಮೇಲೆ ಹೊಡೆಯಲುಬಿಜೆಪಿ ಸರ್ಕಾರ ಮುಂದಾಗಿದೆ’ ಎಂದು ದೂರಿದರು.

ADVERTISEMENT

‘ಮಾವು ಮಾರುಕಟ್ಟೆಯಲ್ಲಿ ಹಿಂದೂಗಳಿಗೆ ಅವಕಾಶ ನೀಡಬೇಕೆಂಬ ಅಭಿಯಾನಮಾಡುತ್ತಿದ್ದಾರೆ. ಬಿಜೆಪಿಯ ಅಜೆಂಡಾವೇ ರೈತರನ್ನು ಸಾಯಿಸೋದು.ಹಲಾಲ್, ಜಟ್ಕಾ ಕಟ್ ಎಂದು ಹೋರಾಟದಿಂದ ನಷ್ಟ ಆಗಿದ್ದುರೈತರಿಗೆ. ಇದು ರೈತರು ಬದುಕಿದ್ದಾಗ ಕತ್ತು ಹಿಸುಕಿ ಸಾಯಿಸೋ ಪ್ರಯತ್ನ. ಅದರಿಂದ ಅಧಿಕಾರಕ್ಕೆ ಬರುತ್ತೇವೆ ಎಂದು ಬಿಜೆಪಿಯವರು ದಿನಕ್ಕೊಂದುವಿಷಯ ಹಿಡಿದು ಹೊರಟಿದ್ದಾರೆ’ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.