
ಬೇಲೂರು: ಮಹಿಳೆಯರು ಆರ್ಥಿಕ ಸ್ವಾವಲಂಬನೆ ಕಡೆ ಹೆಜ್ಜೆ ಇಟ್ಟಿರುವುದು ದೇಶದ ಪ್ರಗತಿಗೆ ಪೂರಕವಾಗಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಇಲ್ಲಿನ ತಾಲ್ಲೂಕು ಪಂಚಾಯಿತಿಯ ಆವರಣದಲ್ಲಿ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ನಿಗಮದ ವತಿಯಿಂದ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಅವರು ಮಾತನಾಡಿದರು.
ತಾಲ್ಲೂಕಿನ 70 ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಸಂಕಷ್ಟದಲ್ಲಿರುವ ಮಹಿಳೆಯರಿಗೆ ಸ್ವಂತ ಉದ್ಯೋಗಕ್ಕೆ ಸಹಾಯವಾಗುವಂತೆ
19 ಅರ್ಹ ಫಲಾನುಭವಿಗಳನ್ನು ಗುರುತಿಸಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತಿದೆ. ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡು ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸಿ, ದುಡಿದ ಹಣದಲ್ಲಿ ಸ್ವಲ್ಪ ಭಾಗವನ್ನು ಉಳಿತಾಯ ಮಾಡಿ ಸಂಕಷ್ಟದ ಸಮಯದಲ್ಲಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅಧಿಕಾರಿಗಳಾದ ರಾಕೇಶ್, ಶೋಭಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.