
ಬಂಧನ (ಸಾಂದರ್ಭಿಕ ಚಿತ್ರ)
ಹಾಸನ: ಸಕಲೇಶಪುರ ತಾಲ್ಲೂಕಿನಲ್ಲಿ 2016 ರಲ್ಲಿ ನಡೆದಿದ್ದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಮೂವರು ಆರೋಪಿಗಳಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಪೋಕ್ಸೊ ವಿಶೇಷ ನ್ಯಾಯಾಲಯ) ಕಠಿಣ ಶಿಕ್ಷೆ ವಿಧಿಸಿದೆ.
ಪ್ರಮುಖ ಆರೋಪಿ ರೂಪೇಶ್ ಎಂಬಾತನಿಗೆ ಪೋಕ್ಸೊ ಕಾಯ್ದೆಯಡಿ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25ಸಾವಿರ ದಂಡ, ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಎರಡನೇ ಆರೋಪಿ ಹೊನ್ನಪ್ಪ ಎಂಬಾತನಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹25ಸಾವಿರ ದಂಡ, ಮೂರನೇ ಆರೋಪಿ ಚಂದ್ರಶೇಖರ್ ಎಂಬಾತನಿಗೆ 7 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹25ಸಾವಿರ ದಂಡ ವಿಧಿಸಲಾಗಿದೆ. ಸಂತ್ರಸ್ತೆಗೆ ₹7 ಲಕ್ಷ ಪರಿಹಾರ ನೀಡಲು ಆದೇಶಿಸಲಾಗಿದೆ.
9 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣದಲ್ಲಿ ತನಿಖೆ ನಡೆಸಿದ ಸಕಲೇಶಪುರ ಗ್ರಾಮಾಂತರ ಪೊಲೀಸರು, ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಎಚ್.ಎಂ. ದೇವರಾಜು ಈ ಆದೇಶ ನೀಡಿದ್ದಾರೆ. ವಿಶೇಷ ಸಾರ್ವಜನಿಕ ಅಭಿಯೋಜಕ ಶ್ರೀನಿವಾಸಗೌಡ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.