ಮಾರನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಮಣ್ಣು ಕುಸಿದಿರುವುದು
ಹಾಸನ: ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ಬಳಿ ಭೂಕುಸಿತ ಸಂಭವಿಸಿದ್ದು, ಶಿರಾಡಿ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ವಾಹನಗಳು ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಮಾಡಿದ್ದಾರೆ.
ಮಂಗಳೂರಿನಿಂದ ಬೆಂಗಳೂರಿಗೆ ಬರುವ ವಾಹನಗಳು ಸಂಪಾಜೆ ಮತ್ತು ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸಲಿವೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.