ADVERTISEMENT

ಶಿರಾಡಿ: ಹಗಲಿನಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ

​ಪ್ರಜಾವಾಣಿ ವಾರ್ತೆ
Published 21 ಜುಲೈ 2022, 12:30 IST
Last Updated 21 ಜುಲೈ 2022, 12:30 IST
ಶಿರಾಡಿ ಘಾಟ್ (ಸಂಗ್ರಹ ಚಿತ್ರ)
ಶಿರಾಡಿ ಘಾಟ್ (ಸಂಗ್ರಹ ಚಿತ್ರ)   

ಹಾಸನ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ –75ರಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ, ಇಲ್ಲಿನ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶ ಹೊರಡಿಸಿದ್ದಾರೆ. ಆದರೆ, ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿದೆ.

ಕಾರು, ಜೀಪು, ಟೆಂಪೊ, ಮಿನಿ ವ್ಯಾನ್‌, ಸಾರಿಗೆ ಸಂಸ್ಥೆಯ ಬಸ್‌, ರಾಜಹಂಸ, ಐರಾವತ ಬಸ್‌ಗಳು, 6 ಚಕ್ರದ ವಾಹನಗಳು, 20 ಟನ್ ಸಾಮರ್ಥ್ಯದ ಸರಕು ಸಾಗಣೆ ವಾಹನಗಳು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಈ ಮಾರ್ಗದಲ್ಲಿ ಸಂಚರಿಸಬಹುದು. ಆಂಬುಲೆನ್ಸ್‌, ಅಗ್ನಿಶಾಮಕದಳದ ವಾಹನ ಸೇರಿದಂತೆ ತುರ್ತು ಸೇವಾ ವಾಹನಗಳು 24 ಗಂಟೆ ಸಂಚಾರ ಮಾಡಬಹುದು.

ಬುಲೆಟ್‌ ಟ್ಯಾಂಕರ್‌ಗಳು, ಕಾರ್ಗೋ ಕಂಟೈನರ್‌ಗಳು, ಉದ್ದ ಚಾಸಿ ಹೊಂದಿ ವಾಹನಗಳು, ಮಲ್ಟಿ ಎಕ್ಸೆಲ್‌ ಟ್ರಕ್‌ ಟ್ರೈಲರ್‌ಗಳು ಹಾಗೂ 20 ಟನ್‌ಗಿಂತ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಜುಲೈ 15 ರಿಂದ ಇಲ್ಲಿಯವರೆಗೆ ಈ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.