ADVERTISEMENT

ಶಿರಾಡಿಘಾಟ್‌ನಲ್ಲಿ ವಾಹನ ಸಾಲು

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2019, 11:18 IST
Last Updated 10 ಆಗಸ್ಟ್ 2019, 11:18 IST

ಹಾಸನ: ಜಿಲ್ಲೆಯಲ್ಲಿ ಮಳೆ ಅಬ್ಬರ ಕೊಂಚ ತಗ್ಗಿದ್ದರೂ ಪ್ರವಾಹದ ಭೀತಿ ಮುಂದುವರಿದಿದೆ. ಸಕಲೇಶಪುರ ಪಟ್ಟಣದ ಆಜಾದ್ ರಸ್ತೆ ಸೇರಿದಂತೆ ತಗ್ಗು ಪ್ರದೇಶ ಸಂಪೂರ್ಣ ಜಲಾವೃತವಾಗಿದೆ. ಅಕ್ಷರಶಃ ನದಿಯಂತಾಗಿದೆ. ಆಜಾದ್ ರಸ್ತೆಯ ಎಲ್ಲಾ ನಿವಾಸಿಗಳನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.

ಹೇಮಾವತಿ ಜಲಾಶಯಕ್ಕೆ ದಾಖಲೆ ಪ್ರಮಾಣದ 1 ಲಕ್ಷದ 30 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.

ಭೂಕುಸಿತ ಉಂಟಾಗಿ ಶಿರಾಡಿ ಘಾಟ್ ಬಂದ್ ಆಗಿದ್ದರೂ, ಹಾಸನ-ಮಂಗಳೂರು ನಡುವಿನ ವಾಹನ ಸವಾರರು ಪ್ರಯಾಣ ಮುಂದುವರಿಸಿದ್ದರಿಂದ ಟ್ರಾಫಿಕ್ ಜಾಂ ಉಂಟಾಗಿದೆ. ಹತ್ತಾರು ಕಿಲೋ ಮೀಟರ್ ವರೆಗೂ ಎಲ್ಲಾ ರೀತಿಯ ವಾಹನಗಳು ಸಾಲುಗಟ್ಟಿವೆ. ಹೊಳೆ ಮಲ್ಲೇಶ್ವರ ದೇವಸ್ಥಾನ ಪೂರ್ಣ ಮುಳುಗಿದೆ.

ADVERTISEMENT

ರಾಮನಾಥಪುರ, ಹೊಳೆನರಸೀಪುರ-ಚನ್ನರಾಯಪಟ್ಟಣ, ಹೊಳೆನರಸೀಪುರ-ಪಿರಿಯಾಪಟ್ಟಣ ರಸ್ತೆ ಬಂದ್ ಆಗಿದೆ. ಹಾನುಬಾಳು ಸಮೀಪ ಗುಡ್ಡಕುಸಿದು ಸಕಲೇಶಪುರ–ಮೂಡಿಗೆರೆ ರಾಜ್ಯ ಹೆದ್ದಾರಿ ಬಂದ್ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.