
ಹಾಸನ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಶುಭನ್ವಿತಾ ಗುರುವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಗುರುವಾರ ಇಲ್ಲಿನ ಎಸ್ಪಿ ಕಚೇರಿಗೆ ಬಂದ ಶುಭನ್ವಿತಾ ಅವರಿಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ತಮ್ಮಯ್ಯ ಮತ್ತು ಶ್ರೀನಿಧಿ ಸೇರಿದಂತೆ ಹಿರಿಯ ಅಧಿಕಾರಿಗಳು ಗೌರವ ವಂದನೆ ಸಲ್ಲಿಸಿ, ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.
ಬಳಿಕ ಅವರು ಕಡತಗಳಿಗೆ ಸಹಿ ಹಾಕುವ ಮೂಲಕ ಅಧಿಕೃತವಾಗಿ ಜವಾಬ್ದಾರಿ ವಹಿಸಿಕೊಂಡರು. ನಂತರ ಎಸ್ಪಿ ಶುಭನ್ವಿತಾ, ಕಚೇರಿ ಸಿಬ್ಬಂದಿ ಪರಿಚಯ ಮಾಡಿಕೊಂಡರು.
ಆರ್‌ಸಿಬಿ ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಐಡಿ ತಂಡದಲ್ಲಿ ಶುಭನ್ವಿತಾ ಪ್ರಮುಖ ಪಾತ್ರ ವಹಿಸಿದ್ದು, ಅವರ ನೇತೃತ್ವದಲ್ಲೇ ತನಿಖೆ ಆರಂಭವಾಗಿತ್ತು.
ಜಿಲ್ಲೆಯ ಮೂರನೇ ಮಹಿಳಾ ಎಸ್ಪಿಯಾಗಿ ಶುಭನ್ವಿತಾ ಅಧಿಕಾರ ಸ್ವೀಕರಿಸಿದಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.