ಚನ್ನರಾಯಪಟ್ಟಣ: ಆಟೊ ಚಾಲಕರು ಸ್ಮಾರ್ಟ್ ಕಾರ್ಡ್‍ಗಳನ್ನು ಪಡೆದುಕೊಳ್ಳಬೇಕು ಎಂದು ಆಟೊ ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ ಹೇಳಿದರು.
ಪಟ್ಟಣದ ಗಣಪತಿ ಪೆಂಡಾಲ್‍ನಲ್ಲಿ ಸೋಮವಾರ ಕಾರ್ಮಿಕ ಇಲಾಖೆ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಆಟೊ ಚಾಲಕರ ಸಂಘದ ಸಹಯೋಗದಲ್ಲಿ ಏರ್ಪಡಿಸಿದ ಆಟೊ ಚಾಲಕರಿಗೆ ಸ್ಮಾರ್ಟ್‍ಕಾರ್ಡ್ ನೋಂದಣಿ ಶಿಬಿರದಲ್ಲಿ ಅವರು ಮಾತನಾಡಿದರು.
ಈ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡು ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳುವ ಮೂಲಕ ಪ್ರಯೋಜನ ಪಡೆದುಕೊಳ್ಳಬೇಕು. ಚಾಲಕರು ಕಡ್ಡಾಯವಾಗಿ ಚಾಲನಾ ಪರವಾನಗಿ ಮತ್ತು ಬ್ಯಾಡ್ಜ್ ಮಾಡಿಸಬೇಕು. ಅಪಘಾತ ಸಂಭವಿಸಿದಾಗ ಪರಿಹಾರ ಸೌಲಭ್ಯ ದೊರೆಯುತ್ತದೆ. ಚಾಲಕರ ಮಕ್ಕಳಿಗೆ ಇಲಾಖೆಯಿಂದ ಶೈಕ್ಷಣಿಕ ಸಹಾಯಧನ ದೊರಕಲಿದೆ ಎಂದರು.
ಕಾರ್ಮಿಕ ನಿರೀಕ್ಷಕ ಡಿ.ಆರ್. ಪುಟ್ಟರಾಜು ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ಒದಗಿಸಲಾಗುವುದು. ಪಟ್ಟಣದಲ್ಲಿ 1936 ಚಾಲಕರು ಸ್ಮಾರ್ಟ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಹಂತಹಂತವಾಗಿ ಎಲ್ಲಾ ಎಲ್ಲಾ ಚಾಲಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಅಸಂಘಟಿತ ಕಾರ್ಮಿಕರಿಗೆ ಸೇವಾಭದ್ರತೆ ಹಾಗೂ ಜೀವನ ಭದ್ರತೆಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆತಂದಿದೆ. ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಅಥವಾ ಅಂಗವೈಕಲ್ಯಕ್ಕೆ ಒಳಗಾದರೆ ಅವಲಂಬಿತ ಕುಟುಂಬದವರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಸಂಘದ ಗೌರವಾಧ್ಯಕ್ಷ ಕೋಟೆ ಚಂದ್ರಶೇಖರ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಆಟೋಚಾಲಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿ ಸಂದೀಪ್, ನವೀನ್, ಶ್ರೀಧರ್, ಶಂಕರ್ ವೆಂಕಟಾಚಲ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.