ADVERTISEMENT

ಹಾನಸ ಕ್ಷೇತ್ರದ ಜೆಡಿಎಸ್‌ ಟಿಕೆಟ್‌: ತಾಯಿಯ ಬೆಂಬಲಕ್ಕೆ ನಿಂತ ಮಕ್ಕಳು

ಜೆಡಿಎಸ್‌ ಟಿಕೆಟ್‌ಗಾಗಿ ಭವಾನಿ ರೇವಣ್ಣ– ಸ್ವರೂಪ್‌ ಮಧ್ಯೆ ಹೆಚ್ಚಿದ ಪೈಪೋಟಿ

​ಪ್ರಜಾವಾಣಿ ವಾರ್ತೆ
Published 28 ಜನವರಿ 2023, 18:57 IST
Last Updated 28 ಜನವರಿ 2023, 18:57 IST
ಭವಾನಿ ರೇವಣ್ಣ ಅವರಿಗೆ ಹಾಸನ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್‌ ನೀಡುವಂತೆ ಆಗ್ರಹಿಸಿ ಶನಿವಾರ ತಮ್ಮ ನಿವಾಸದ ಎದುರು ಜಮಾಯಿಸಿದ್ದ ಜೆಡಿಎಸ್‌ ಕಾರ್ಯಕರ್ತೆಯರೊಂದಿಗೆ ಸಂಸದ ಪ್ರಜ್ವಲ್ ರೇವಣ್ಣ ಮಾತುಕತೆ ನಡೆಸಿದರು
ಭವಾನಿ ರೇವಣ್ಣ ಅವರಿಗೆ ಹಾಸನ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್‌ ನೀಡುವಂತೆ ಆಗ್ರಹಿಸಿ ಶನಿವಾರ ತಮ್ಮ ನಿವಾಸದ ಎದುರು ಜಮಾಯಿಸಿದ್ದ ಜೆಡಿಎಸ್‌ ಕಾರ್ಯಕರ್ತೆಯರೊಂದಿಗೆ ಸಂಸದ ಪ್ರಜ್ವಲ್ ರೇವಣ್ಣ ಮಾತುಕತೆ ನಡೆಸಿದರು   

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಲು ಭವಾನಿ ರೇವಣ್ಣ ಹಾಗೂ ಎಚ್‌.ಪಿ.ಸ್ವರೂಪ್‌ ಮಧ್ಯೆ ಪೈಪೋಟಿ ಜೋರಾಗಿದೆ.

ಭವಾನಿ ರೇವಣ್ಣ ಅವರಿಗೆ ಟಿಕೆಟ್‌ ನೀಡುವಂತೆ ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತೆಯರು ನಗರದ ಸಂಸದರ ನಿವಾಸದ ಎದುರು ಶನಿವಾರ ಸೇರಿದ್ದರು. ಇದರ ಬೆನ್ನಲ್ಲೇ, ಎಚ್‌.ಪಿ.ಸ್ವರೂಪ್‌ ಮನೆಯ ಎದುರು ಅವರ ಬೆಂಬಲಿಗರು ಸಭೆ ನಡೆಸಿ ಟಿಕೆಟ್‌ಗಾಗಿ ಒತ್ತಾಯಿಸಿದರು.

‘ಭವಾನಿ ರೇವಣ್ಣ ಹಾಸನ ಕ್ಷೇತ್ರದಿಂದ ಸ್ಪರ್ಧಿಸುವ ಅನಿವಾರ್ಯತೆ ಇಲ್ಲ’ ಎಂಬ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಅರಕಲಗೂಡು ತಾಲ್ಲೂಕಿನ ಹರದೂರು ಗ್ರಾಮದಲ್ಲಿ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ, ‘ಅವರು ಪಕ್ಷದ ಹಿರಿಯರು. ನಾವು ಅವರ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ. ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮಗೂ ಅದಕ್ಕೂ ಸಂಬಂಧವಿಲ್ಲ’ ಎಂದರು.

ADVERTISEMENT

‘2018ರಲ್ಲಿ ಹಾಸನ ಕ್ಷೇತ್ರವನ್ನು ಕಳೆದುಕೊಂಡಿದ್ದೇವೆ. 2023ರಲ್ಲಿ ಮತ್ತೆ ಪಡೆದುಕೊಳ್ಳಬೇಕು ಎನ್ನುವುದೇ ನಮ್ಮ ಉದ್ದೇಶ. ಇತ್ತೀಚಿನ ಲೆಕ್ಕಾಚಾರವನ್ನು ಗಮನಿಸಿದರೆ ಭವಾನಿ ಅಭ್ಯರ್ಥಿಯಾದರೆ ಗೆಲುವು ಖಚಿತ. ಅವರು ಹಾಸನಕ್ಕೆ ಅನಿವಾರ್ಯವಲ್ಲ. ಆದರೆ, ಸೂಕ್ತ ಅಭ್ಯರ್ಥಿ’ ಎಂದು
ಪ್ರತಿಪಾದಿಸಿದರು.

ಬಲ ಪ್ರದರ್ಶನ: ಎಚ್.ಪಿ.ಸ್ವರೂಪ್‌ ಹಾಗೂ ಭವಾನಿ ರೇವಣ್ಣ ಅವರಿಗೆ ಟಿಕೆಟ್‌ ನೀಡುವಂತೆ ಅವರ ಬೆಂಬಲಿಗರು ಪ್ರತ್ಯೇಕವಾಗಿ ಬಲ ಪ್ರದರ್ಶನ ಮಾಡಿದರು.

ನಿವಾಸದ ಎದುರು ಜಮಾಯಿಸಿದ್ದ ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿದ ಸಂಸದ ಪ್ರಜ್ವಲ್‌ ರೇವಣ್ಣ, ‘ಹಿಂದಿನ ಚುನಾವಣೆಯಲ್ಲಿ ದೇವೇಗೌಡರು ಸ್ಥಳೀಯ ಶಾಸಕರು ಹಾಗೂ ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಂಡಿ
ದ್ದಾರೆ. ಈ ಬಾರಿಯೂ ಸೂಕ್ತ ನಿರ್ಧಾರ ಪ್ರಕಟಿಸಲಿದ್ದಾರೆ’ ಎಂದು
ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.