ಅರಕಲಗೂಡು: ‘ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಸರ್ಕಾರಿ ನೌಕರರಿಗೆ ಕ್ರೀಡಾಕೂಟಗಳು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿವೆ’ ಎಂದು ಮುಖಂಡ ನರಸೇಗೌಡ ತಿಳಿಸಿದರು.
ಪಟ್ಟಣದಲ್ಲಿ ಶನಿವಾರ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಕೂಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವ ಕ್ರೀಡಾಪಟುಗಳಿಗೆ ಟೀ ಶರ್ಟ್ ವಿತರಿಸಿ ಮಾತನಾಡಿದರು.
ತಾಲ್ಲೂಕಿನ 43 ನೌಕರರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಶ್ಲಾಘನೀಯ. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲೂ ಭಾಗವಹಿಸಿ ಪ್ರಶಸ್ತಿ ವಿಜೇತರಾಗಿ ತಾಲ್ಲೂಕಿಗೆ ಕೀರ್ತಿ ತಂದರೆ ಅಂತಹ ನೌಕರರಿಗೆ ವೈಯಕ್ತಿಕವಾಗಿ ವಿಶೇಷ ಉಡುಗೊರೆ ನೀಡಿ ಗೌರವಿಸುವುದಾಗಿ ತಿಳಿಸಿದರು.
ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜ್ ಮಾತನಾಡಿ, ‘ತಾಲ್ಲೂಕಿನ ನೌಕರರು ಪ್ರತಿ ವರ್ಷ ಒಂದಲ್ಲ ಒಂದು ಪ್ರಶಸ್ತಿಯನ್ನು ತಾಲ್ಲೂಕಿಗೆ ತಂದುಕೊಂಡುತ್ತಿದ್ದರು. ಈ ಬಾರಿ ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಹೆಚ್ಚಿನ ಪ್ರಶಸ್ತಿ ಪಡೆದು ತಾಲ್ಲೂಕಿನ ಗೌರವ ಹೆಚ್ಚಿಸುವಂತೆ ಹಾರೈಸಿ, ಪತ್ರಿವರ್ಷದಂತೆ ಈ ಸಾಲಿನಲ್ಲಿ ಸಮಾಜ ಸೇವಕ ಗಾಂಧಿನಗರ ದಿವಾಕರ್ ಅವರು ಕ್ರೀಡಾಪಟುಗಳಿಗೆ ಟೀ ಶರ್ಟ್ ಕೊಡುಗೆಯಾಗಿ ನೀಡಿದ್ದಾರೆ’ ಎಂದರು.
ಮುಖಂಡ ಶಂಭುನಾಥಪುರ ಕೃಷ್ಣೇಗೌಡ, ಮಹೇಶ್ ಬೆಟ್ಟದಹಳ್ಳಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.