ಚನ್ನರಾಯಪಟ್ಟಣ: ಪಟ್ಟಣದ ಬಿ.ಜಿ.ಎಸ್ ಪಬ್ಲಿಕ್ ಶಾಲೆಯಲ್ಲಿ ಪರೀಕ್ಷೆ ಬರೆದ 44 ವಿದ್ಯಾರ್ಥಿಗಳಲ್ಲಿ 42 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ 98 ಫಲಿತಾಂಶ ಪಡೆದಿದೆ.
ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಜಿ.ಎಸ್. ಗಗನ್ (ಶೇ 98.24), ಕೆ.ಎಸ್. ಮಾನಸಾ (ಶೇ 96.58), ಜಿ. ಧನ್ಯಶ್ರೀ (ಶೇ 95.36), ಡಿ. ಪ್ರತೀಕ್ಷಾ (ಶೇ95.36), ಎನ್.ಎಂ. ಸಮರ್ಥಗೌಡ (ಶೇ 95.3) ಅಂಕಗಳಿಸಿದ್ದಾರೆ. 10 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 20 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಪ್ರಾಂಶುಪಾಲ ಸಿ.ಸಿ. ಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.