
ಆಲೂರು: ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರತರಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ. ಮಕ್ಕಳ ಸಾಮರ್ಥ್ಯವನ್ನು ಅಂಕಗಳಿಂದ ಅಳೆಯಬಾರದು ಎಂದು ಶಾಸಕ ಸಿಮೆಂಟ್ ಮಂಜು ಸಲಹೆ ನೀಡಿದರು.
ತಾಲ್ಲೂಕಿನ ಸಂಕಲಾಪುರಮಠದ ಜಾನ್ಸಿ ಪೂರ್ವ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಸುಗ್ಗಿಸಿರಿ–2025-26 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ಮಗುವಿನಲ್ಲಿ ಒಂದಲ್ಲ ಒಂದು ಪ್ರತಿಬೆ ಅಡಗಿರುತ್ತದೆ. ಮಕ್ಕಳ ಪ್ರತಿಭೆಯನ್ನು ಶಿಕ್ಷಕರು ಮತ್ತು ಪೋಷಕರು ಪ್ರೋತ್ಸಾಹಿಸಬೇಕು. ಮಕ್ಕಳನ್ನು ಮತ್ತೊಬ್ಬರ ಎದುರು ಹೀಯಾಳಿಸಬಾರದು ಎಂದು ಕಿವಿಮಾತು ಹೇಳಿದರು.
ಸಾನ್ನಿಧ್ಯ ವಹಿಸಿದ್ದ ಮಠದ ಧರ್ಮರಾಜೇಂದ್ರ ಸ್ವಾಮೀಜಿ, ‘ಮಕ್ಕಳಿಗೆ ಬಾಲ್ಯದಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ ಮತ್ತು ಕುಟುಂಬದ ಬಾಂಧವ್ಯದ ಬಗ್ಗೆ ತಿಳಿಸಬೇಕು’ ಎಂದರು.
ಸರ್ಕಾರಿ ನೌಕರರ ಸಂಘದ ನಿರ್ದೇಶಕ ವೈ.ಆರ್. ರವಿ, ಪ್ರಧಾನ ಕಾರ್ಯದರ್ಶಿ ಎಂ.ಆರ್. ಶ್ರೀನಿವಾಸ್, ರುದ್ರೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.