ಹಾಸನ: ಎನ್‌ಡಿಆರ್‌ಕೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಸನ ಶಾಖೆ ಆಶ್ರಯದಲ್ಲಿ ವಿಶ್ವ ರೆಡ್ ಕ್ರಾಸ್ ದಿನವನ್ನು ಆಚರಿಸಲಾಯಿತು.
ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಶಬ್ಬೀರ್ ಅಹ್ಮದ್ ಹಾಗೂ ಭಾರತೀಯ ಸ್ಕೌಟ್ ಅಂಡ್ ಗೈಡ್ಸ್ ಕಾರ್ಯದರ್ಶಿ ಸುರೇಶ್ ಗುರೂಜಿ ಮಾತನಾಡಿ, ರೆಡ್ ಕ್ರಾಸ್ ಸಂಸ್ಥೆಯ ಇತಿಹಾಸ, ಸಂಸ್ಥಾಪಕ ಜೀನ್ ಹೇನ್ರಿ ಡ್ಯುನಾಂಟ್ ಹಾಗೂ ರೆಡ್ ಕ್ರಾಸ್ ಸಂಸ್ಥೆ ಸಿದ್ಧಾಂತಗಳ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಧ್ಯಾಪಕ, ಯುವ ರೆಡ್ ಕ್ರಾಸ್ ಸಂಸ್ಥೆ ಸಂಯೋಜಕ ಮಧು ಕೆ.ಆರ್. ನಿರೂಪಿಸಿದರು. ಪ್ರಾಂಶುಪಾಲ ಡಾ.ಎ. ರವಿಕಾಂತ್ ಅಧ್ಯಕ್ಷತೆ ವಹಿಸಿದ್ದರು. ಸಂಯೋಜಕರಾದ ಅಭಿಷೇಕ್, ಬಸವಣ್ಣ, ಪ್ರಿಯಾಂಕ ಎಚ್.ಎಂ. ಹಾಜರಿದ್ದರು.
ನವಕೀಸ್ ಕಾಲೇಜು: ನವಕೀಸ್ ಎಂಜಿನಿಯರ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಸಹಯೋಗದಲ್ಲಿ ವಿಶ್ವ ರೆಡ್ ಕ್ರಾಸ್ ದಿನವನ್ನು ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ 104 ಜನ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಕಾರ್ಯಕ್ರಮದ ಉದ್ಘಾಟಿಸಿದ ರೆಡ್ ಕ್ರಾಸ್ ಸಂಸ್ಥೆ ನಿರ್ದೇಶಕ ಉದಯ್‌ಕುಮಾರ್, ರಕ್ತದಾನದ ಉಪಯೋಗ ಹಾಗೂ ಮಹತ್ವದ ಬಗ್ಗೆ ವಿವರಿಸಿದರು. ಹಿರಿಯ ನಿರ್ದೇಶಕ ಎಚ್.ಡಿ ಕುಮಾರ್, ವಿಶ್ವ ರೆಡ್ ಕ್ರಾಸ್ ದಿನಾಚರಣೆಯ ಬಗ್ಗೆ ಮಾತನಾಡಿದರು.
ಕಾಲೇಜಿನ ಪ್ರಾಧ್ಯಾಪಕ ಡಾ.ಪ್ರತಾಪ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ಕಾರಿ ರಕ್ತನಿಧಿಯ ಮುಖ್ಯಸ್ಥೆ ಡಾ.ನಾಗಲಕ್ಷ್ಮಿ ರಕ್ತದಾನದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಖಜಾಂಚಿ ಜಯೇಂದ್ರಕುಮಾರ್, ರಕ್ತದಾನಿಗಳಿಗೆ ರೆಡ್ ಕ್ರಾಸ್ ವತಿಯಿಂದ 100 ಕೀ ಚೈನ್ ನೀಡಿದರು. ಕಾಲೇಜಿನ ಯುವ ರೆಡ್‌ಕ್ರಾಸ್ ಸಂಯೋಜಕ ಎಚ್.ಎ. ದೀಪಕ್ ನಿರೂಪಿಸಿದರು.
ಸಂತ ಜೋಸೆಫ್ ಕಾಲೇಜು: ಕಾಲೇಜಿನ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನದ ಅಂಗವಾಗಿ ರಕ್ತ ದಾನ ಶಿಬಿರ ಆಯೋಜಿಸಲಾಗಿತ್ತು.
ರೆ.ಫಾ. ರಾಯನ್ ಪಿರೇರಾ, ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸ್ವಯಂ ಪ್ರೇರಿತ ರಕ್ತದಾನದ ಮಹತ್ವವನ್ನು ತಿಳಿಸುವುದರ ಜೊತೆಗೆ ಅನೇಕ ಜೀವ ಉಳಿಸಲು ವಿದ್ಯಾರ್ಥಿಗಳು ಕೊಡುಗೆ ನೀಡಬೇಕು ಎಂದು ತಿಳಿಸಿದರು.
ಪ್ರಾಂಶುಪಾಲ ಡಾ.ಮ್ಯಾಕ್ಸಿಂ ಡಯಾಸ್, ಸರ್ಕಾರಿ ರಕ್ತನಿಧಿ ಮುಖ್ಯಸ್ಥೆ ಡಾ.ನಾಗಲಕ್ಷ್ಮಿ, ಕಾರ್ಯಕ್ರಮದ ಸಂಯೋಜಕರಾದ ಲಯ ದಿವಾಕರ್, ಸೌಮ್ಯ ಭಾಗವಹಿಸಿದ್ದರು. ಕಾಲೇಜಿನ 47 ವಿದ್ಯಾರ್ಥಿಗಳು ಮತ್ತು ಆಧ್ಯಾಪಕರು ಸಕ್ರಿಯವಾಗಿ ಶಿಬಿರದಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.