ADVERTISEMENT

‘ವಿದ್ಯಾರ್ಥಿಗಳಿಗೆ ಕಾನೂನಿನ ಜ್ಞಾನ ಅಗತ್ಯ’

ಹಿರಿಯ ಸಿವಿಲ್ ನ್ಯಾಯಾಧೀಶೆ ಜಿ.ಕೆ. ದಾಕ್ಷಾಯಿಣಿ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2025, 16:34 IST
Last Updated 27 ಏಪ್ರಿಲ್ 2025, 16:34 IST
ಹಾಸನದ ಎನ್‌ಡಿಆರ್‌ಕೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇನ್‌ಸ್ಪೆಕ್ಟರ್‌ ರಾಘವೇಂದ್ರ ಪ್ರಕಾಶ್ ಮಾತನಾಡಿದರು.
ಹಾಸನದ ಎನ್‌ಡಿಆರ್‌ಕೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇನ್‌ಸ್ಪೆಕ್ಟರ್‌ ರಾಘವೇಂದ್ರ ಪ್ರಕಾಶ್ ಮಾತನಾಡಿದರು.   

ಪ್ರಜಾವಾಣಿ ವಾರ್ತೆ ‌‌

ಹಾಸನ: ಪ್ರತಿಯೊಬ್ಬ ವಿದ್ಯಾರ್ಥಿ ಕಾನೂನಿನ ಜ್ಞಾನ ಪಡೆದುಕೊಳ್ಳಬೇಕು. ಉತ್ತಮ ಸಮಾಜ ನಿರ್ಮಿಸಲು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಕೆಲಸ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಜಿ.ಕೆ. ದಾಕ್ಷಾಯಿಣಿ ತಿಳಿಸಿದರು.

ನಗರದ ಎನ್‌ಡಿಆರ್‌ಕೆ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪೊಲೀಸ್ ಆಶ್ರಯದಲ್ಲಿ ಏರ್ಪಡಿಸಿದ್ದ ಮಾದಕ ವಸ್ತು ವ್ಯಸನ ಮುಕ್ತ ಸಮಾಜ ಕುರಿತು  ಕಾನೂನು ಜಾಗೃತಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

ADVERTISEMENT

ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಗಳಿಂದ ದೂರವಿದ್ದು, ಉತ್ತಮ ಪ್ರಜೆಯಾಗಿ ಬೆಳೆದು ಪಾಲಕರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಕೆ. ತಮ್ಮಯ್ಯ ಮಾತನಾಡಿ, ಮಾದಕ ದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಿಸಲು ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ಹೇಳಿದರು.

ಇನ್‌ಸ್ಪೆಕ್ಟರ್‌ ರಾಘವೇಂದ್ರ ಪ್ರಕಾಶ್  ಮಾದಕ ವಸ್ತು ವ್ಯಸನದಿಂದಾಗಿ ಆರೋಗ್ಯದ ಮೇಲೆ ಹಾಗೂ ಸಮಾಜದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.

ಪಿಎಸ್‌ಐ ವಿನಯ್ ಕುಮಾರ್, ಎನ್‌ಡಿಆರ್‌ಕೆ ಪ್ರಾಂಶುಪಾಲ ಎ. ರವಿಕಾಂತ್, ಉಪನ್ಯಾಸಕಿ ಎ.ಜೆ. ಪ್ರಿಯಾ, ಪ್ರವೀಣ್ , ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.