
ನುಗ್ಗೇಹಳ್ಳಿ: ‘ಪೋಷಕರು ತಮ್ಮ ಮಕ್ಕಳಿಗೆ ಮೌಲ್ಯದಾರಿತ ಶಿಕ್ಷಣಕ್ಕಿಂತ ಅಂಕಗಳ ಆಧಾರಿತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದರಿಂದ ಮಕ್ಕಳು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಈ ಬಗ್ಗೆ ಪೋಷಕರು ತಮ್ಮ ಮಕ್ಕಳ ಮನಸ್ಥಿತಿ ಅರಿಯಬೇಕಾಗಿದೆ’ ಎಂದು ಚನ್ನರಾಯಪಟ್ಟಣ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆಡಳಿತ ಅಧಿಕಾರಿ ಡಾ. ಯುವರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.
ಹೋಬಳಿ ಕೇಂದ್ರದ ಪಿ.ಎಚ್ ದೇಶಪಾಂಡೆ ಪಬ್ಲಿಕ್ ಸ್ಕೂಲ್ ವತಿಯಿಂದ 2025-26ನೇ ಸಾಲಿನ ಹೊಯ್ಸಳ ಉತ್ಸವ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ನಮ್ಮ ಪೂರ್ವಿಕರ ಕಾಲದಲ್ಲಿ ಗುರುಕುಲ ಮಾದರಿಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿತ್ತು. ಆದರೆ ಇಂದಿನ ವೈಜ್ಞಾನಿಕ ಸ್ಪರ್ಧ ಶಿಕ್ಷಣ ಯುಗದಲ್ಲಿ ಎಲ್ಲವೂ ಮಾಯವಾಗಿ ಸಂಬಂಧಗಳನ್ನೇ ಮರೆಯುವಂತೆ ಆಗಿದೆ. ಈ ಬಗ್ಗೆ ಎಲ್ಲರೂ ಚಿಂತಿಸುವ ಅಗತ್ಯವಿದೆ’ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ದೀಪ ಮಾತನಾಡಿ, ‘ತಾಲ್ಲೂಕಿನಲ್ಲಿ ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ಮಾರಾಟದಿಂದ ವಿದ್ಯಾರ್ಥಿಗಳ ಬದುಕಿನ ಮೇಲೆ ಪರಿಣಾಮ ಬೀರುತ್ತಿದೆ. ಒಂದು ಬಾರಿ ಈ ವ್ಯಸನಕ್ಕೆ ಒಳಪಟ್ಟರೆ ಮತ್ತೆ ಅವರನ್ನು ಈ ಚಟದಿಂದ ಬಿಡಿಸುವುದು ಕಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಮುಖ್ಯವಾಗಿದೆ’ ಎಂದರು.
ಪಿಎಚ್ ದೇಶಪಾಂಡೆ ಪಬ್ಲಿಕ್ ಸ್ಕೂಲ್ ಕಾರ್ಯದರ್ಶಿ ಶಶಿಕಲಾ ಎನ್ ಎಲ್ ಮಂಜುನಾಥ್ ಮಾತನಾಡಿದರು. 2025-26ನೇ ಸಾಲಿನಲ್ಲಿ ಉತ್ತಮ ವಿದ್ಯಾರ್ಥಿಗಳಾಗಿ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಕ್ರೀಡಾಧಿಕಾರಿ ಕೆ.ಟಿ. ಆನಂದ್, ಹೋಬಳಿ ಶಿಕ್ಷಣ ಸಂಯೋಜಕ ಕರಿಯಪ್ಪ ಗೌಡ, ಬಿಆರ್‌ಪಿ ಶ್ರೀಕಾಂತ್, ಸಿಆರ್‌ಪಿ ಮಂಜೇಗೌಡ, ಶಾಲಾ ಆಡಳಿತ ಮಂಡಳಿ ನಿರ್ದೇಶಕರಾದ ವಾಸು, ಸರೋಜ ಕೆಂಪರಾಜು, ಕನಕಲತಾ ರವೀಶ್, ಉಷಾರಾಜು, ಚಿನ್ಮಯ್, ಚಿರಾಗ್, ನಾಗರತ್ನ, ವಿಶ್ವಾಸ್, ಪ್ರಮುಖರಾದ ರೋಜಾ, ರೇಷ್ಮಾ, ಶಾಲೆಯ ಮುಖ್ಯ ಶಿಕ್ಷಕ ಜೆ ಎಲ್ ರವಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.