
ಸಕಲೇಶಪುರ: ರಾಜ್ಯ ಸಭಾ ಸದಸ್ಯೆ ಹಾಗೂ ಇನ್ಫೋಸಿಸ್ ಫೌಂಡೇಶನ್‌ನ ಸ್ಥಾಪಕ-ಅಧ್ಯಕ್ಷೆ ಸುಧಾ ಮೂರ್ತಿ ಭಾನುವಾರ ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸುಮಾರು ಒಂದೂವರೆ ಗಂಟೆಗಳ ಕಾಲ ಪೂಜೆ ಸಲ್ಲಿಸಿದರು.
‘ಐತಿಹಾಸಿಕ ಹಿನ್ಕೆಲೆ ಹೊಂದಿರುವ ಸಕಲೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವುದಕ್ಕಾಗಿಯೇ ಬಂದಿದ್ದೇನೆ, ಈ ಹಿಂದೆಯೂ ಸಹ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿ ಹೋಗಿದ್ದೆ’ ಎಂದರು. ಬೆಳಿಗ್ಗೆ 10ಕ್ಕೆ ದೇವಸ್ಥಾನಕ್ಕೆ ಬಂದ ಅವರು, 11.30ರ ವರೆಗೂ ಸಕಲೇಶ್ವರಸ್ವಾಮಿ ಹಾಗೂ ಪಕ್ಕದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಅರ್ಚಕ ಸೋಮೇಶ್ ದೇವಸ್ಥಾನದ ಇತಿಹಾಸ ವಿವರಿಸಿದರು.
ಶಾಸಕ ಸಿಮೆಂಟ್ ಮಂಜು ಸಹ ಸುಧಾ ಮೂರ್ತಿಯೊಂದಿಗೆ ಪೂಜೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಸಭಾ ಅನುದಾನದ ಹಾಗೂ ಇನ್ಫೋಸಿಸ್ ಫೌಂಡೇಶನ್ ಇ ಎಸ್ ಆರ್ ನಿಧಿಯಿಂದ ಸಕಲೇಶಪುರದ ಕ್ರೀಡಾಂಗಣ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಪತ್ರ ಸಲ್ಲಿಸಿದರು.
ತಹಶೀಲ್ದಾರ್ ಕೆ.ಎಸ್. ಸುಪ್ರೀತಾ, ಪುರಸಭಾ ಮಾಜಿ ಅಧ್ಯಕ್ಷ ಎಸ್.ಡಿ. ಆದರ್ಶ, ಬ್ಯಾಕವರಳ್ಳಿ ಜಯಣ್ಣ, ನಂದಿಕೃಪ ರಾಜು, ಬಿಜೆಪಿ ತಾಲ್ಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್‌ಸ್ ಸೇರಿದಂತೆ ಹಲವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.