ಹಾಸನ: ಮಂಗಳೂರಿನಲ್ಲಿ ನಡೆದ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ನೆರವು ನೀಡಿದ ಆರೋಪದಲ್ಲಿ ಇಲ್ಲಿನ ನೌಶಾದ್ ಅಲಿಯಾಸ್ ಚೋಟೆ ನೌಶಾದ್(39)ನನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಇಲ್ಲಿನ ಮಹಿಳಾ ಪೊಲೀಸ್ ಠಾಣೆ ಮುಂಭಾಗದಲ್ಲಿ ಹೋಟೆಲ್ ನಡೆಸುತ್ತಿದ್ದ ಆರೋಪಿಯು ಕೆ.ಆರ್.ಪುರಂನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಾಗಿದ್ದ. ಕೊಲೆಗೆ ಸಂಚು ರೂಪಿಸಲು ನೆರವು ನೀಡಿದ ಆರೋಪದ ಮೇರೆಗೆ ಆತನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಸುರತ್ಕಲ್, ಬಜ್ಪೆ, ಮೂಡುಬಿದರೆ, ಮಂಗಳೂರು, ಉತ್ತರ ಬಂಟ್ವಾಳ ಗ್ರಾಮಾಂತರ ಠಾಣೆಗಳಲ್ಲಿ ಆರು ಪ್ರಕರಣಗಳು ದಾಖಲಾಗಿವೆ.
‘ಹೋಟೆಲ್ ಉದ್ಯಮದೊಂದಿಗೆ ಜ್ಯೂಸ್ ಸೆಂಟರ್ ನಡೆಸುತ್ತಿದ್ದ ಆರೋಪಿಯ ಹೋಟೆಲ್‌ಗೆ ಹೆಚ್ಚಾಗಿ ಮಂಗಳೂರು ಮತ್ತು ಕೇರಳ ಮೂಲದ ಗ್ರಾಹಕರು ಬರುತ್ತಿದ್ದರು ಎಂದು ತಿಳಿದು ಬಂದಿದ್ದು, ಘಟನೆ ಬಳಿಕ ಆರೋಪಿ ಹೋಟೆಲ್ ಬಂದ್ ಮಾಡಿದ್ದ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.