ADVERTISEMENT

ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2022, 15:51 IST
Last Updated 10 ಮಾರ್ಚ್ 2022, 15:51 IST
ಹಾಸನದ ಹೇಮಾವತಿ ಪ್ರತಿಮೆ ಎದುರು ಬಿಜೆಪಿ ಕಾರ್ಯಕರ್ತರು ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.
ಹಾಸನದ ಹೇಮಾವತಿ ಪ್ರತಿಮೆ ಎದುರು ಬಿಜೆಪಿ ಕಾರ್ಯಕರ್ತರು ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.   

ಹಾಸನ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ತೋರಿರುವುದರಿಂದ ಬಿಜೆಪಿ ಕಾರ್ಯಕರ್ತರು ನಗರದ ಹೇಮಾವತಿ ಪ್ರತಿಮೆ ಎದುರು ಗುರುವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ನಗರ ಮಂಡಲ ಬಿಜೆಪಿ ಅಧ್ಯಕ್ಷ ವೇಣುಗೋಪಾಲ್ ಮಾತನಾಡಿ, ‘ನಾಲ್ಕುರಾಜ್ಯಗಳಲ್ಲಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ವಿಶೇಷವಾಗಿ ಉತ್ತರಪ್ರದೇಶದಲ್ಲಿ 37 ವರ್ಷಗಳ ನಂತರ ಎರಡನೇ ಬಾರಿಗೆ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದಿರುವುದು ಪ್ರಥಮ ಬಾರಿ’ ಎಂದರು.

ನಗರ ಮಾಧ್ಯಮ ಪ್ರಮುಖ್ ಪ್ರೀತಿವರ್ಧನ್‌ ಮಾತನಾಡಿ, ‘ಪಂಜಾಬ್ ಇವಿಎಂಬಗ್ಗೆ ಕಾಂಗ್ರೆಸ್‌ ನಾಯಕರು ಚಕಾರವೆತ್ತುತ್ತಿಲ್ಲ. ಆದರೆ, ಉತ್ತರಪ್ರದೇಶದಲ್ಲಿ ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ಟೀಕಿಸುವುದನ್ನು ಬಿಟ್ಟು ಅಭಿವೃದ್ಧಿಗೆ ಬಗ್ಗೆ ಚಿಂತನೆ ಮಾಡಲಿ’ ಎಂದು ಸಲಹೆ ನೀಡಿದರು.

ADVERTISEMENT

ನಗರಸಭೆ ಅಧ್ಯಕ್ಷ ಆರ್. ಮೋಹನ್, ಸದಸ್ಯರಾದ ಸಂತೋಷ್, ವಿಕ್ರಮ್,ನಾಮನಿರ್ದೇಶಿತ ಸದಸ್ಯರಾದ ಅರುಣ್, ಪುಟ್ಟಸ್ವಾಮಿ, ಪ್ರೇಮಣ್ಣ,ಮುಖಂಡರಾದ ಶೋಭನ್ ಬಾಬು, ಚನ್ನಕೇಶವ, ನಾಗೇಶ್, ಶಂಕರ್ ಗೌಡ,ಮೀಸೇ ಸಿದ್ದಣ್ಣ, ಸುರೇಶ್, ವೇದಾವತಿ, ನಾಗರತ್ನಾ, ಮಂಜುಳಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.