
ಪ್ರಜಾವಾಣಿ ವಾರ್ತೆ
ಸಕಲೇಶಪುರ: ಸಕಲೇಶಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷರನ್ನಾಗಿ ಪುರಸಭೆ ಮಾಜಿ ಅಧ್ಯಕ್ಷ ಸೈಯದ್ ಮುಫೀಸ್ ಅವರನ್ನು ಸರ್ಕಾರ ನೇಮಕ ಮಾಡಿದೆ. ಪ್ರಾಧಿಕಾರದ ಸದಸ್ಯರಾಗಿ ಎಚ್.ಎಚ್. ಚೊಕ್ಕಣ್ಣಗೌಡ, ದೇವರಾಜು, ಬಿ.ಡಿ. ವಿಜಯ್ ಅವರನ್ನು ನೇಮಕ ಮಾಡಲಾಗಿದೆ.
ನೂತನ ಅಧ್ಯಕ್ಷ ಸೈಯ್ಯದ್ ಮುಫೀಜ್ ಮಾತನಾಡಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲು ಕಾಂಗ್ರೆಸ್ ಮುಖಂಡ ಮುರಳಿ ಮೋಹನ್, ತಾಲ್ಲೂಕು ಅಧ್ಯಕ್ಷ ಬೈರಮುಡಿ ಚಂದ್ರು, ಸಂಸದ ಶ್ರೇಯಸ್ ಪಟೇಲ್, ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಎಲ್ಲ ಕಾರ್ಯಕರ್ತರು ಕಾರಣರಾಗಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.