ADVERTISEMENT

ವಸತಿ ಶಾಲೆಯಲ್ಲಿ ಮಕ್ಕಳಿಗೆ ವ್ಯವಸ್ಥಿತ ಸೌಲಭ್ಯ: ಪ್ರಶಂಸೆ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದಲಿತ ಸಂಘಟನೆಗಳ ಸದಸ್ಯರಿಂದ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 12:32 IST
Last Updated 17 ಜೂನ್ 2025, 12:32 IST
ನುಗ್ಗೇಹಳ್ಳಿ ಹೋಬಳಿಯ ಸೋಮವಾರ ಸಂತೆ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಮೊರಾರ್ಜಿ ದೇಸಾಯಿ ಬಾಲಕರ ಹಾಗೂ ಬಾಲಕಿಯರ ವಸತಿ ಶಾಲೆಗೆ ಜಿಲ್ಲಾ ವಿವಿಧ ದಲಿತ ಪರ ಸಂಘಟನೆಗಳ ಸದಸ್ಯರು ಭೇಟಿ ನೀಡಿ ಮಕ್ಕಳೊಂದಿಗೆ ಮಾತುಕತೆ ನಡೆಸಿದರು 
ನುಗ್ಗೇಹಳ್ಳಿ ಹೋಬಳಿಯ ಸೋಮವಾರ ಸಂತೆ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಮೊರಾರ್ಜಿ ದೇಸಾಯಿ ಬಾಲಕರ ಹಾಗೂ ಬಾಲಕಿಯರ ವಸತಿ ಶಾಲೆಗೆ ಜಿಲ್ಲಾ ವಿವಿಧ ದಲಿತ ಪರ ಸಂಘಟನೆಗಳ ಸದಸ್ಯರು ಭೇಟಿ ನೀಡಿ ಮಕ್ಕಳೊಂದಿಗೆ ಮಾತುಕತೆ ನಡೆಸಿದರು    

ನುಗ್ಗೇಹಳ್ಳಿ: ಹೋಬಳಿಯ ಸೋಮವಾರ ಸಂತೆ ಬಳಿ ಹೋಬಳಿಯ ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾಧಿಕಾರಿಗಳ ಭರವಸೆಯಂತೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗೆ ವ್ಯವಸ್ಥಿತವಾಗಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಡಾ. ಬಾಬು ಜಗಜೀವನ್ ರಾಮ್ ಸಂಘಟನೆಯ ಜಿಲ್ಲಾಧ್ಯಕ್ಷ ಎಚ್.ಡಿ.ಶಂಕರ್ ರಾಜ್ ತಿಳಿಸಿದರು.

ಹೋಬಳಿಯ ಸೋಮವಾರ ಸಂತೆ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಮೊರಾರ್ಜಿ ದೇಸಾಯಿ ಬಾಲಕರ ಹಾಗೂ ಬಾಲಕಿಯರ ವಸತಿ ಶಾಲೆಗೆ ಜಿಲ್ಲಾ ವಿವಿಧ ದಲಿತ ಪರ ಸಂಘಟನೆಗಳ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ವಸತಿ ಶಾಲೆಯ ಅಕ್ಕಪಕ್ಕದ ಭೂ ಮಾಲೀಕರು ಕಾಂಪೌಂಡ್ ಸೇರಿದಂತೆ ವಿವಿಧ ಕಾಮಗಾರಿ ನಡೆಸದಂತೆ ತಡೆ ಹಿಡಿದ ಪರಿಣಾಮ ಸುಮಾರು 4 ವರ್ಷಗಳ ಕಾಲ ವಸತಿ ಶಾಲೆ ಪ್ರಾರಂಭಗೊಳ್ಳದೆ ಮಕ್ಕಳಿಗೆ ತುಂಬಾ ತೊಂದರೆ ಆಗಿತ್ತು. ಈ ಬಗ್ಗೆ ವಿವಿಧ ಸಂಘಟನೆಗಳ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಕಳೆದ ಏಪ್ರಿಲ್ ತಿಂಗಳಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಕ್ರೈಸ್ ಅಧಿಕಾರಿಗಳು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಭೂ ಮಾಲೀಕರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿದ್ದರು.ಹೊಸ ಕಟ್ಟಡವನ್ನು ಪ್ರಾರಂಭಿಸಿದ್ದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ’ ಎಂದರು.  

ADVERTISEMENT

ಹೊಸ ಕಟ್ಟಡ ಹಾಗೂ ವ್ಯವಸ್ಥೆಯ ಬಗ್ಗೆ ಮಕ್ಕಳು ಹಾಗೂ ಪೋಷಕರ ಪ್ರಶಂಸೆ ವ್ಯಕ್ತಪಡಿಸಿದರು. ಬಾಕಿ ಸ್ವಲ್ಪ ಪ್ರಮಾಣದ ಕಾಮಗಾರಿ ಪೂರ್ಣಗೊಂಡರೆ ಒಳ್ಳೆಯದು ಎಂದು ಪೋಷಕರು ತಿಳಿಸಿದರು.

ಈ ಸಂದರ್ಭದಲ್ಲಿ ಕ್ರೈಸ್ತ ಎ ಈ ಮಹೇಶ್, ಹೋಬಳಿ ವಸತಿ ಶಾಲೆ ಪ್ರಾಂಶುಪಾಲೆ ಸಂಚಿತ, ದಲಿತ ಸಂಘರ್ಷ ಸಮಿತಿ ಮೈಸೂರು ವಿಭಾಗದ ಸಂಚಾಲಕ ಭಾಸ್ಕರ್ ಜಾಜುರು, ಡಾ.ಬಾಬು ಜಗಜೀವನ್ ರಾಮ್ ಸಂಘಟನೆ ತಾಲೂಕು ಅಧ್ಯಕ್ಷ ಶ್ರೀನಿವಾಸ್, ನಗರ ಘಟಕದ ಅಧ್ಯಕ್ಷ ಪುನೀತ್, ಆಲೂರು ತಾಲ್ಲೂಕು ಘಟಕದ ಅಧ್ಯಕ್ಷ ಅರಸಪ್ಪ, ಅರಸೀಕೆರೆ ಅಧ್ಯಕ್ಷ ರಾಜಣ್ಣ ಗುಂಡ್ಕನಳ್ಳಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಂಕರ್ ದೇಶಾಣಿ, ಸೇರಿದಂತೆ ಸಂಘಟನೆಯ ವಿವಿಧ ಪದಾಧಿಕಾರಿಗಳು ಇದ್ದರು.

ನುಗ್ಗೇಹಳ್ಳಿ ಹೋಬಳಿಯ ಸೋಮವಾರ ಸಂತೆ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಮೊರಾರ್ಜಿ ದೇಸಾಯಿ ಬಾಲಕರ ಹಾಗೂ ಬಾಲಕಿಯರ ವಸತಿ ಶಾಲೆಯ ಕಾಂಪೌಂಡ್ ನಿರ್ಮಾಣಕ್ಕೆ ರೈತರು ಅಡ್ಡಿಪಡಿಸಿರುವ ಸ್ಥಳಕ್ಕೆ ಜಿಲ್ಲಾ ವಿವಿಧ ದಲಿತ ಪರ ಸಂಘಟನೆಗಳ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಮಗಾರಿ ಪೂರ್ಣಗೊಳಿಸಲು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸುವಂತೆ ಒತ್ತಾಯಿಸಿದರು 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.