ADVERTISEMENT

ಕುಸಿದು ಬಿದ್ದ ತಹಶೀಲ್ದಾರ್: ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 24 ಮೇ 2021, 5:23 IST
Last Updated 24 ಮೇ 2021, 5:23 IST
ಬೇಲೂರು ತಹಶೀಲ್ದಾರ್ ಎನ್.ವಿ.ನಟೇಶ್
ಬೇಲೂರು ತಹಶೀಲ್ದಾರ್ ಎನ್.ವಿ.ನಟೇಶ್   

ಬೇಲೂರು: ಕೊರೊನಾ ಸೋಂಕಿತರನ್ನು ಕೋವಿಡ್ ಕೇಂದ್ರಕ್ಕೆ ಸೇರಿಸಲು ತೆರಳಿದ್ದ ಸಂದರ್ಭ ತಹಶೀಲ್ದಾರ್ ಎನ್.ವಿ. ನಟೇಶ್ ಅವರು ಕುಸಿದು ಬಿದ್ದಿದ್ದು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಾಲ್ಲೂಕಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಎಲ್ಲ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇಂದ್ರಕ್ಕೆ ಸೇರಿಸಬೇಕೆಂದು ಜಿಲ್ಲಾಡಳಿತ ಆದೇಶಿಸಿರುವ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ ತಾಲ್ಲೂಕು ಆಡಳಿತದ ತಂಡದೊಂದಿಗೆ ತಾಲ್ಲೂಕಿನ ತೆಂಡೇಕೆರೆ ಗ್ರಾಮಕ್ಕೆ ತೆರಳಿ ಸೋಂಕಿತರನ್ನು ಕೋವಿಡ್ ಕೇಂದ್ರಕ್ಕೆ ಹೊರಡುವಂತೆ ತಿಳಿಸುತ್ತಿದ್ದ ಸಂದರ್ಭ ತಹಶೀಲ್ದಾರ್ ಎನ್.ವಿ.ನಟೇಶ್, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ಈ ಸಂದರ್ಭ ಜೊತೆಯಲ್ಲಿದ್ದ ತಾ.ಪಂ ಇಒ ರವಿಕುಮಾರ್ ಹಾಗೂ ವೈದ್ಯಾಧಿಕಾರಿ ಡಾ.ನರಸೇಗೌಡ, ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಿ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿರುವ ತಹಶೀಲ್ದಾರ್ ಎನ್.ವಿ.ನಟೇಶ್ ಚೇತರಿಸಿಕೊಳ್ಳುತ್ತಿದ್ದಾರೆ. ಕೆಲಸದ ಒತ್ತಡದಿಂದ ಹೀಗಾಗಿದೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.