ADVERTISEMENT

ತಾ.ಪಂ ಕಚೇರಿ ಸೀಲ್‍ಡೌನ್

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 2:34 IST
Last Updated 20 ಸೆಪ್ಟೆಂಬರ್ 2020, 2:34 IST
ಹೊಳೆನರಸೀಪುರ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಐವರಿಗೆ ಕೊರೊನಾ ಸೋಂಕು ತಗುಲಿದ್ದರಿಂದ ಪುರಸಭೆಯ ಹುಸೇನ್ ಹಾಗೂ ಸಿಬ್ಬಂದಿ ಸೀಲ್‌ಡೌನ್ ಮಾಡಿದರು
ಹೊಳೆನರಸೀಪುರ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಐವರಿಗೆ ಕೊರೊನಾ ಸೋಂಕು ತಗುಲಿದ್ದರಿಂದ ಪುರಸಭೆಯ ಹುಸೇನ್ ಹಾಗೂ ಸಿಬ್ಬಂದಿ ಸೀಲ್‌ಡೌನ್ ಮಾಡಿದರು   

ಹೊಳೆನರಸೀಪುರ: ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಐವರಿಗೆ ಕೊರೊನಾ ಸೋಂಕು ತಗುಲಿದ್ದು ಪುರಸಭೆಯ ಹುಸೇನ್ ಹಾಗೂ ಆರೋಗ್ಯ ಇಲಾಖೆಯ ಸ್ವಾಮಿ ಕಚೇರಿಯನ್ನು ಸೀಲ್‌ಡೌನ್‍ಮಾಡಿದರು.

ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಚೇರಿಯಲ್ಲಿ ನಡೆಯುವ ಕೆಲಸಗಳನ್ನು ಆನ್‍ಲೈನ್ ಮೂಲಕ ವ್ಯವಸ್ಥೆ ಮಾಡಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಯೋಗೇಶ್ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಸೋಂಕು ತಗುಲದಂತಿರಲಿ ಎಂದು ಸೀಲ್‌ಡೌನ್‌ ಮಾಡಲಾಗಿದೆ. ಸೋಂಕಿತರ ಆರೋಗ್ಯ ಸುಧಾರಿಸಿದ ಕೂಡಲೇ ಕಚೇರಿ ತೆರೆಯುತ್ತೇವೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.