ಸಕಲೇಶಪುರ: ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದ ಬ್ಲಾಸಮ್ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿಗೆ ಮೈಮೇಲೆ ಬಾಸುಂಡೆ ಬರುವಂತೆ ತರಗತಿಯ ಶಿಕ್ಷಕಿ ರಂಜಿತಾ ಶುಕ್ರವಾರ ಹೊಡೆದಿದ್ದು, ವಿದ್ಯಾರ್ಥಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಈ ಸಂಬಂಧ ವಿದ್ಯಾರ್ಥಿಯ ಪೋಷಕರು ಶಾಲೆಯ ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದಾರೆ. ವಿದ್ಯಾರ್ಥಿಗೆ ಬೆನ್ನಿನ ಮೇಲೆ ಬಾಸುಂಡೆಗಳು ಬಂದಿದ್ದು, ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗಿದೆ. ವಿದ್ಯಾರ್ಥಿಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಶಿಕ್ಷಕಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.