ADVERTISEMENT

ಶ್ರವಣಬೆಳಗೊಳ | ನಿವೃತ್ತ ಶಿಕ್ಷಕನನ್ನು ಸನ್ಮಾನಿಸಿದ ಹಳೆಯ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2025, 2:05 IST
Last Updated 4 ಆಗಸ್ಟ್ 2025, 2:05 IST
ಶ್ರವಣಬೆಳಗೊಳದ ಚ.ರಾ.ಪ.ರಸ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘವು ನಿವೃತ್ತ ಶಿಕ್ಷಕ ಡಿ.ಪುಟ್ಟಸ್ವಾಮಿ ಅವರನ್ನು ಸನ್ಮಾನಿಸಿತು. ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡಿದ್ದರು
ಶ್ರವಣಬೆಳಗೊಳದ ಚ.ರಾ.ಪ.ರಸ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘವು ನಿವೃತ್ತ ಶಿಕ್ಷಕ ಡಿ.ಪುಟ್ಟಸ್ವಾಮಿ ಅವರನ್ನು ಸನ್ಮಾನಿಸಿತು. ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡಿದ್ದರು   

ಶ್ರವಣಬೆಳಗೊಳ: ಪಟ್ಟಣದ ಚ.ರಾ.ಪ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘವು ಗುರುವಂದನಾ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಡಿ.ಪುಟ್ಟಸ್ವಾಮಿ ಅವರನ್ನು ಭಾನುವಾರ ಸನ್ಮಾನಿಸಿದರು. 

ಮುಖ್ಯ ಅತಿಥಿಗಳಾಗಿದ್ದ ಮುಖ್ಯ ಶಿಕ್ಷಕ ಎಸ್.ಜೆ.ದೇವೇಂದ್ರಕುಮಾರ್ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಗುರು ಶಿಷ್ಯರ ಬಾಂಧವ್ಯ ಅಪೂರ್ವ ಅವಿಸ್ಮರಣೀಯ ಎಂದು ಹೇಳಿದರು. ಕಲಿತ ಶಾಲೆ ಮತ್ತು ಕಲಿಸಿದ ಗುರುಗಳ ಸೇವೆಯನ್ನು ನೆನೆದು ತಾವೆಲ್ಲರೂ ಒಗ್ಗೂಡಿ ಬಂದು ನಿವೃತ್ತರಾದ ಡಿ.ಪುಟ್ಟಸ್ವಾಮಿ ಅವರನ್ನು ಗೌರವಿಸಿದ್ದು ಶ್ಲಾಘನೀಯ ಎಂದರು.

ಇಡೀ ಜಿಲ್ಲೆಯಲ್ಲಿಯಲ್ಲಿಯೇ ಪ್ರಾಥಮಿಕ ಶಾಲೆಯ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಗೆ ಪೌರಾಣಿಕ ಹಿನ್ನೆಲೆಯ ಕುರುಕ್ಷೇತ್ರ ನಾಟಕವನ್ನು ಕಲಿಸಿ ಯಶಸ್ವಿಯಾಗಿ ಪ್ರದರ್ಶಿಸಿದ ಹೆಗ್ಗಳಿಕೆ ಇವರದ್ದು ಎಂದರು. ಹಳೇಯ ವಿದ್ಯಾರ್ಥಿಗಳಾದ ಸಾಗರ್, ಅರ್ಪಿತಾ, ಹರ್ಷಿತಾ, ಯಶೋದಾ, ಶೋಭಾ ಜೆ.ಎಸ್, ಶಿಕ್ಷಕರುಗಳ ಸೇವೆಯನ್ನು ಸ್ಮರಿಸಿ ಮಾತನಾಡಿದರು.

ADVERTISEMENT

ಹಳೆಯ ವಿದ್ಯಾರ್ಥಿಗಳು ನಿವೃತ್ತ ಶಿಕ್ಷಕ ಡಿ.ಪುಟ್ಟಸ್ವಾಮಿ ಅವರಿಗೆ ನೆನಪಿನ ಕಾಣಿಕೆಯೊಂದಿಗೆ ಸನ್ಮಾನ ಮಾಡಿದರು. ಕಾರ್ಯಕ್ರಮದಲ್ಲಿ ಕಬ್ಬಾಳು ಶಾಲೆಯ ಮುಖ್ಯ ಶಿಕ್ಷಕಿ ಇಂದಿರಾ ಎ.ಸಿ. ಶಿಕ್ಷಕಿ ಶಶಿಕಲಾ, ರವಿಚಂದ್ರನ್ ಮಾತನಾಡಿದರು.

ಎಸ್‌ಡಿಎಂಸಿ ಅಧ್ಯಕ್ಷ ಸಿದ್ದೇಗೌಡ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಡಿ.ಪುಟ್ಟಸ್ವಾಮಿ ತಾವು ಕರ್ತವ್ಯ ನಿರ್ವಹಿಸಿದ ಶಾಲೆಯಲ್ಲಿ ಸಸಿ ನೆಟ್ಟರು. ಹಳೇ ವಿದ್ಯಾರ್ಥಿಗಳ ಸಂಘದ ಸದಸ್ಯರುಗಳು ಭಾಗವಹಿಸಿದ್ದವರಿಗೆ ಊಟದ ವ್ಯವಸ್ಥೆ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.