ಬಂಧನ
(ಪ್ರಾತಿನಿಧಿಕ ಚಿತ್ರ)
ಹಾಸನ: ಸಕಲೇಶಪುರ ಹೊರವಲಯದ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ ನಾಲ್ವರನ್ನು ಸ್ಥಳೀಯರು ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಬ್ಬರು ಯುವಕರು ಹಾಗೂ ಇಬ್ಬರು ಯುವತಿಯರನ್ನು ಬೆನ್ನಟ್ಟಿದ ಸ್ಥಳೀಯರು ಹಾಗೂ ಪೊಲೀಸರು ಅಗಲಹಟ್ಟಿ ಬಳಿ ವಶಕ್ಕೆ ಪಡೆದಿದ್ದಾರೆ. ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿದ್ದ ತಾಮ್ರದ ವಸ್ತುಗಳು, ಹುಂಡಿಯ ಹಣ, ಪೂಜಾ ಸಾಮಗ್ರಿಗಳನ್ನು ಈ ತಂಡ ಕಳ್ಳತನ ಮಾಡಿತ್ತು. ಅನಾಥ ಆಶ್ರಮ ನಡೆಸಲು ಹಣ, ಬಟ್ಟೆಗಳನ್ನು ನೀಡುವಂತೆ ಹಳ್ಳಿ ಹಳ್ಳಿಗೆ ತೆರಳಿ ಸಂಗ್ರಹ ಮಾಡುತ್ತಿದ್ದ ತಂಡದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.