ವಿದ್ಯುತ್ ಉತ್ಪಾದನೆ
ಹಾಸನ: ‘ರಾಜ್ಯದಲ್ಲಿ 2,500 ಮೆಗಾವಾಟ್ ವಿದ್ಯುತ್ ಉತ್ಪಾದನೆಗೆ ಟೆಂಡರ್ ಆಹ್ವಾನಿಸಲಾಗಿದ್ದು, ಇದಕ್ಕಾಗಿ ಖಾಸಗಿಯವರು ₹ 10ಸಾವಿರ ಕೋಟಿ ಹೂಡಲು ಸಿದ್ಧರಿದ್ದಾರೆ’ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಖಾಸಗಿಯವರು ವಿದ್ಯುತ್ ಉತ್ಪಾದನೆ ಮಾಡಲಿದ್ದಾರೆ. ನಾವು ಅವರಿಂದ ಯೂನಿಟ್‍ಗೆ ₹ 3.17 ಹಾಗೂ ₹ 2.75 ದರದಲ್ಲಿ ಖರೀದಿಸುತ್ತೇವೆ’ ಎಂದರು.
‘ಇಂಧನ ಇಲಾಖೆಯಲ್ಲಿ ಆರ್ಥಿಕ ಸಮಸ್ಯೆ ಇಲ್ಲ. ಕಳೆದ ವರ್ಷ 1,500 ಎಂಜಿನಿಯರ್‌ಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಈ ವರ್ಷ 3ಸಾವಿರ ಲೈನ್‍ಮನ್‍ಗಳ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ’ ಎಂದರು.
‘ನಮ್ಮ ಸರ್ಕಾರ ರೈತರಿಗೆ ₹ 19ಸಾವಿರ ಕೋಟಿ ಸಹಾಯಧನ ನೀಡುತ್ತಿದೆ. ಕಾಫಿ ಬೆಳೆಗಾರರು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದು, ಬಡ್ಡಿ ಸಹಿತ ಬಾಕಿ ಪಾವತಿಸಿದರೆ ಅವರಿಗೂ ಬೇಕಾದ ವಿದ್ಯುತ್ ಸೌಲಭ್ಯ ಸಿಗಲಿದೆ’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.