ADVERTISEMENT

ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ ವೈಭವ

​ಪ್ರಜಾವಾಣಿ ವಾರ್ತೆ
Published 12 ಮೇ 2025, 13:06 IST
Last Updated 12 ಮೇ 2025, 13:06 IST
ಜಾವಗಲ್‌ನಲ್ಲಿ ಸೋಮವಾರ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು
ಜಾವಗಲ್‌ನಲ್ಲಿ ಸೋಮವಾರ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು   

ಜಾವಗಲ್: ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಲಕ್ಷ್ಮೀನರಸಿಂಹ ಸ್ವಾಮಿಯ ಬ್ರಹ್ಮ ರಥೋತ್ಸವ ಸೋಮವಾರ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಮೇ 7ರ ದಶಮಿಯಂದು ಹಗಲು ನಿತ್ಯೋತ್ಸವ ಸೇವೆಯೊಂದಿಗೆ ಆರಂಭವಾದ ಲಕ್ಷ್ಮೀನರಸಿಂಹ ಸ್ವಾಮಿಯ ಧಾರ್ಮಿಕ ವಿಧಿ ವಿಧಾನಗಳು ಗರುಡ ಧ್ವಜಾರೋಹಣ, ಶೇಷವಾಹನೋತ್ಸವ, ಚಂದ್ರಮಂಡಲೋತ್ಸವ, ಪ್ರಹ್ಲಾದ ಪರಿಪಾಲನೋತ್ಸವ, ಗರುಡೋತ್ಸವ, ಕಲ್ಯಾಣೋತ್ಸವ, ಗಜವಾಹನೋತ್ಸವ, ಸೂರ್ಯ ಮಂಡಲೋತ್ಸವ, ಶಾಂತೋತ್ಸವ, ಅಷ್ಟಾವಧಾನ ಸೇವೆ, ಮಹಾ ನೈವೇದ್ಯ, ಪೂರ್ವಕ ಮಹಾ ಮಂಗಳಾರತಿ ಹೀಗೆ ಆರು ದಿನಗಳ ಕಾಲ ದೇವಾಲಯದಲ್ಲಿ ಅನೇಕ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.

ಕೊನೆಗೆ ಸೋಮವಾರ ಅಲಂಕೃತಗೊಂಡ ರಥದಲ್ಲಿ ಲಕ್ಷ್ಮೀನರಸಿಂಹ ಸ್ವಾಮಿಯ ಉತ್ಸವ ಮೂರ್ತಿಯನ್ನು ಇರಿಸಲಾಯಿತು. ನಂತರ ಭಕ್ತರು ಬ್ರಹ್ಮರಥೋತ್ಸವವನ್ನು ಶ್ರದ್ಧಾಭಕ್ತಿಯಿಂದ ಎಳೆದು ಧನ್ಯತಾಭಾವ ಮೆರೆದು, ಸಂಭ್ರಮಿಸಿದರು.

ADVERTISEMENT

ರಥೋತ್ಸವಕ್ಕೆ ಆಗಮಿಸಿದ್ದ ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.