ADVERTISEMENT

ಮುಂಡಗೋಡು: ಕುಡಿಯುವ ನೀರಿಗೆ ತತ್ವಾರ

​ಪ್ರಜಾವಾಣಿ ವಾರ್ತೆ
Published 26 ಮೇ 2020, 17:01 IST
Last Updated 26 ಮೇ 2020, 17:01 IST
ಅರಕಲಗೂಡು ತಾಲ್ಲೂಕು ಮುಂಡಗೋಡು ಗ್ರಾಮದ ಹೊರವಲಯದ ಪಂಪ್‌ನಿಂದ ನೀರು ಹೊತ್ತೊಯ್ಯುತ್ತಿರುವ ಮಹಿಳೆಯರು
ಅರಕಲಗೂಡು ತಾಲ್ಲೂಕು ಮುಂಡಗೋಡು ಗ್ರಾಮದ ಹೊರವಲಯದ ಪಂಪ್‌ನಿಂದ ನೀರು ಹೊತ್ತೊಯ್ಯುತ್ತಿರುವ ಮಹಿಳೆಯರು   

ಅರಕಲಗೂಡು: ತಾಲ್ಲೂಕಿನ ಕತ್ತಿಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡಗೋಡು ಗ್ರಾಮದಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಎದುರಾಗಿದ್ದು ಗ್ರಾಮಸ್ಥರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ.

ಗ್ರಾಮ ಪಂಚಾಯಿತಿ ನಿಯಮಿತವಾಗಿ ಕುಡಿಯುವ ನೀರು ಸರಬರಾಜು ಮಾಡುತ್ತಿಲ್ಲ. ಎರಡ್ಮೂರು ದಿನಗಳಿಗೊಮ್ಮೆ ನೀರು ಬರುತ್ತಿದೆ. ಈ ಕಾರಣ ಜನರು ಒಂದೆರಡು ಕಿ.ಮೀ ದೂರದಿಂದ ನೀರು ಹೊತ್ತು ತರುವ ಪರಿಸ್ಥಿತಿ ಎದುರಾಗಿದೆ. ಈ ನಡುವೆ ನೀರಿನ ತೆರಿಗೆ ಪಾವತಿ ಮಾಡದಿದ್ದರೆ ನೀರು ಸರಬರಾಜು ಮಾಡುವುದಿಲ್ಲ ಎಂದು ಗ್ರಾ.ಪಂ ಬಿಲ್ ಕಲೆಕ್ಟರ್ ಹೇಳುತ್ತಾರೆ.

ಕೊರೊನಾ ಸಂಕಷ್ಟದಿಂದ ಜನರು ನಿತ್ಯದ ಬದುಕು ನಿರ್ವಹಿಸುವುದೇ ಕಷ್ಟವಾಗಿದೆ. ಇಂತಹ ಸಮಯದಲ್ಲಿ ಜನರನ್ನು ನೀರಿನ ತೆರಿಗೆಗಾಗಿ ಪೀಡಿಸುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಸೋಮಶೇಖರ್ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಒಂದರೆಡು ದಿನಗಳಲ್ಲಿ ವ್ಯವಸ್ಥಿತವಾಗಿ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.