ADVERTISEMENT

ಕೋಡಿಮಠದ ಶ್ರೀಗಳು ಮಹಾಗುರುಗಳು: ರಾಜಯೋಗಿಂದ್ರ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 2:15 IST
Last Updated 8 ಜುಲೈ 2025, 2:15 IST
ಅರಸೀಕೆರೆ ತಾಲ್ಲೂಕಿನ ಕೋಡಿಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿದರು
ಅರಸೀಕೆರೆ ತಾಲ್ಲೂಕಿನ ಕೋಡಿಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿದರು   

ಅರಸೀಕೆರೆ: ಗುರು ಪರಂಪರೆಗೆ ಮಾರ್ಗದರ್ಶನ ನೀಡುತ್ತಿರುವ ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ನಮ್ಮೆಲ್ಲರಿಗೂ ಮಹಾ ಗುರುಗಳಿದ್ದಂತೆ ಎಂದು ಹುಬ್ಬಳ್ಳಿ ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು.

ಕೋಡಿಮಠದ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಗುರು ಯೋಗಿ ಪ್ರಭುಕುಮಾರ ಪಟ್ಟಾಧ್ಯಕ್ಷರ 94ನೇ ಪುಣ್ಯ ಸ್ಮರಣೋತ್ಸವದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

‘ಶ್ರೀಗಳು ಮಾಜಿ ಪ್ರಧಾನಿಗಳಾದ ಇಂದಿರಾಗಾಂಧಿ, ಪಿ.ವಿ. ನರಸಿಂಹರಾವ್, ಸೇರಿದಂತೆ ರಾಜ್ಯ ಹಾಗೂ ದೇಶದ ಪ್ರಮುಖ ರಾಜಕಾರಣಿಗಳು ಮಾತ್ರವಲ್ಲ, ಮಠ ಮಂದಿರವನ್ನು ಮುನ್ನಡೆಸುತ್ತಿರುವ ನಮ್ಮಂಥ ಅನೇಕ ಮಠಾಧೀಶರಿಗೆ ತಮ್ಮ ನಿಖರ ಭವಿಷ್ಯ ವಾಣಿಯ ಮೂಲಕ ಮಾರ್ಗದರ್ಶನ ನೀಡುತ್ತಿದ್ದಾರೆ. ಕೋಡಿಮಠದ ಶ್ರೀಗಳನ್ನು ಮಹಾ ಗುರುಗಳು ಎಂದು ಕರೆಯುವುದರಿಂದ ಅವರಿಗಿಂತ ನಮ್ಮೆಲ್ಲರಿಗೂ ಗೌರವ ಹೆಚ್ಚಾಗುತ್ತದೆ’ ಎಂದರು.

ADVERTISEMENT

ಮಾಜಿ ಶಾಸಕ ಕೆ.ಪಿ. ಪ್ರಭುಕುಮಾರ್ ಮಾತನಾಡಿ, ‘ಕವಲೊಡೆದ ದಾರಿಯಲ್ಲಿ ಸಮಾಜ ಸಾಗುತ್ತಿದ್ದು, ಇಂಥ ಸಂಧಿಗ್ದ ಪರಿಸ್ಥಿತಿಯಲ್ಲಿ ಸಮಾಜವರನ್ನು ಸಂಘಟಿಸುವ ಕೆಲಸವನ್ನು ನಮ್ಮ ಮಠಾಧೀಶರು ಮಾಡಬೇಕಿದೆ. ಇದರ ನೇತೃತ್ವವನ್ನು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳೇ ವಹಿಸಬೇಕು’ ಎಂದು ಮನವಿ ಮಾಡಿದರು.

ಮಾಜಿ ಶಾಸಕ ಜಿ.ಎಸ್. ಪರಮೇಶ್ವರಪ್ಪ ಮಾತನಾಡಿ, ‘ನಾಡಿನ ಉದ್ದಗಲಕ್ಕೂ ಭಕ್ತ ವೃಂದವನ್ನು ಕೋಡಿಮಠವು ಹೊಂದಿದ್ದರೂ, ಆರ್ಥಿಕವಾಗಿ ದುರ್ಬಲವಾಗಿತ್ತು. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪೀಠಾಧ್ಯಕ್ಷರಾದ ಬಳಿಕ ಮಠವು ಆರ್ಥಿಕವಾಗಿ ಸದೃಢವಾಗಿ ಬೆಳೆದಿದೆ. ಜಾತಿ, ಮತ, ಪಂಥ ಎನ್ನದೇ ನಂಬಿ ಬರುವ ಭಕ್ತಾರಿಗೆ ಮಾರ್ಗದರ್ಶನ ನೀಡುತ್ತಾ ದೇಶದಾದ್ಯಂತ ಹೆಸರು ಮಾಡಿದೆ’ ಎಂದು ಹೇಳಿದರು.

ಸಮಾರಂಭದಲ್ಲಿ ಪಾಲ್ಗೊಂಡ ಭಕ್ತರು ಕೋಡಿಮಠದ ಬಿಟ್ಟ ಅಧ್ಯಕ್ಷರ ಆಶೀರ್ವಾದ ಪಡೆದು ಪುನೀತರಾದರು. ವೇದಿಕೆಯಲ್ಲಿ ಕಡೂರು ಕೆ. ಬಿದಿರೆ ಮಠದ ಪ್ರಭು ಕುಮಾರ ಶಿವಾಚಾರ್ಯ ಸ್ವಾಮೀಜಿ, ಸೊರಬ ಜಡೆ ಸಂಸ್ಥಾನ ಮಠದ ಮಹಾಂತ ಸ್ವಾಮೀಜಿ, ಕೋಡಿಮಠದ ಉತ್ತರಾಧಿಕಾರಿ ಚೇತನ್ ಮರಿದೇವರು ಸೇರಿದಂತೆ ನಾನಾ ಮಠಾಧೀಶರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

ಬೆಳಿಗ್ಗೆಯಿಂದ ಮಠದ ಆವರಣದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತಾದಿಗಳಿಗೆ ಶ್ರೀಮಠದ ವತಿಯಿಂದ ಸಾಮೂಹಿಕ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.